ವಯನಾಡು ಗುಡ್ಡ ಕುಸಿತದಲ್ಲಿ ಚಾಮರಾಜನಗರ ಮೂಲದ ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ

| Updated By: ರಮೇಶ್ ಬಿ. ಜವಳಗೇರಾ

Updated on: Jul 30, 2024 | 9:51 PM

ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮಣ್ಣಿನಲ್ಲಿ ಗ್ರಾಮಗಳೇ ಹೂತುಹೋಗಿವೆ. ಇದರಿಂದ ಸಾವು ನೋವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿದೆ. ಇನ್ನು ಈ ದುರಂತದಲ್ಲಿ ಚಾಮರಾನಗರದ ಇಬ್ಬರು ಸಾವನ್ನಪ್ಪಿದ್ದು, ಇನ್ನು ಕೆಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ವಯನಾಡು ಗುಡ್ಡ ಕುಸಿತದಲ್ಲಿ ಚಾಮರಾಜನಗರ ಮೂಲದ ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ
ಭೂಕುಸಿತ
Follow us on

ಚಾಮರಾನಗರ, (ಜುಲೈ 30): ದೇವರನಾಡು ಕೇರಳದಲ್ಲಿ ಭಾರೀ ಗುಡ್ಡ ಕುಸಿತದಿಂದ ಸಾವು-ನೋವು ಸಂಖ್ಯೆ ಹೆಚ್ಚಾಗುತ್ತಿದೆ. ವಯನಾಡು ಜಿಲ್ಲೆಯ ಮೆಪ್ಪಾಡಿ, ಮುಂಡಕೈ, ಚೂರಲ್ಮಲ ಗ್ರಾಮದಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 123ಕ್ಕೆ ಏರಿದೆ. ಈ ಪೈಕಿ ಚಾಮರಾಜನಗರ ಜಿಲ್ಲೆಯ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗೂ ರಾಣಿ ಎಂಬುವರ ತಾಯಿ ಸಾವನ್ನಪ್ಪಿದ್ದಾರೆ.

ಇನ್ನು ಚಾಮರಾಜನಗರ ತಾಲೂಕು ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ. ಇವರು ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದರು. ಆದ್ರೆ, ಇದೀಗ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದು, ರಾಜನ್, ರಜನಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ಚಾಮರಾಜನಗರ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇದನ್ನೂ ಓದಿ: ವಯನಾಡಿನಲ್ಲಿ ಭೂಕುಸಿತ, ಚಾಮರಾಜನಗರದ ಎರೆಡು ಕುಟುಂಬಗಳು ನಾಪತ್ತೆ

ಅಲ್ಲದೇ ಮುಂಡಕೈನ ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರದ ಗುಂಡ್ಲುಪೇಟೆಯ ಝಾನ್ಸಿರಾಣಿ, ಎರಡೂವರೆ ವರ್ಷದ ಪುತ್ರ ನಿಹಾಲ್ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ, ಮುಂಡಕೈ, ಚೂರಲ್ಮಲ ಗ್ರಾಮದಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ ಭೂಕುಸಿತ ಸ್ಥಳದಲ್ಲಿ ಸುಮಾರು 98ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇನ್ನು 128 ಜನರಿಗೆ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.