ನವ ಸಂವತ್ಸರ: ದೇವಾಲಯಗಳಿಗೆ ಹರಿದು ಬಂದ ಜನಸಾಗರ

ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿದೆ. ಇಂದು ವರ್ಷದ ಮೊದಲ ದಿನ ದೇವರ ಕೃಪೆಯೊಂದಿಗೆ ಸಾಗಬೇಕೆಂದು ಅನೇಕ ಭಕ್ತರು ದೇವಾಲಯಕ್ಕೆ ಬಂದಿದ್ದರು. ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ. ಇಂದು ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತು ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಹೊಸ ವರ್ಷದಂದು ಹೊಸ ಸಂಕಲ್ಪದೊಂದಿಗೆ ದೇವಿಗೆ ನಮಿಸಿದ್ದಾರೆ. ಪ್ರವಾಸಿಗರು ಹಾಗೂ ಸ್ಥಳೀಯರಿಂದ ಚಾಮುಂಡೇಶ್ವರಿ […]

ನವ ಸಂವತ್ಸರ: ದೇವಾಲಯಗಳಿಗೆ ಹರಿದು ಬಂದ ಜನಸಾಗರ
ಸಾಧು ಶ್ರೀನಾಥ್​

Updated on: Jan 01, 2020 | 6:18 PM

ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿದೆ. ಇಂದು ವರ್ಷದ ಮೊದಲ ದಿನ ದೇವರ ಕೃಪೆಯೊಂದಿಗೆ ಸಾಗಬೇಕೆಂದು ಅನೇಕ ಭಕ್ತರು ದೇವಾಲಯಕ್ಕೆ ಬಂದಿದ್ದರು. ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ.

ಇಂದು ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತು ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಹೊಸ ವರ್ಷದಂದು ಹೊಸ ಸಂಕಲ್ಪದೊಂದಿಗೆ ದೇವಿಗೆ ನಮಿಸಿದ್ದಾರೆ. ಪ್ರವಾಸಿಗರು ಹಾಗೂ ಸ್ಥಳೀಯರಿಂದ ಚಾಮುಂಡೇಶ್ವರಿ ದೇವಾಲಯ ತುಂಬಿ ಹೋಗಿದೆ.

ಅಲ್ಲದೆ ಮೈಸೂರಿನ ಪ್ರಸಿದ್ಧ ನಂಜನಗೂಡು ಶ್ರೀ ಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲೂ ಹೊಸ ವರ್ಷದ ಪ್ರಯುಕ್ತ ಜನಸಾಗರ ಹರಿದು ಬಂದಿದೆ. ಇಂದು ಮುಂಜಾನೆಯಿಂದಲೇ ಭಕ್ತರು ಕಪಿಲಾ ನದಿಯಲ್ಲಿ ಸ್ನಾನ ಮಾಡಿ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಮಾಡಿ ಹೊಸ ವರ್ಷ ಆಚರಣೆ ಮಾಡಿದ್ದಾರೆ.

ದೇವರಿಗೆ ಅಭಿಷೇಕ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ದಾಸೋಹ ಭವನದಲ್ಲಿ ಪ್ರಸಾದ ವಿನಿಯೋಗ ಮಾಡಲಾಗಿದೆ. ಅಷ್ಟೆ ಅಲ್ಲದೆ ಮೈಸೂರಿನ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಚಾಮುಂಡಿ ದೇವಸ್ಥಾನ, ರಾಘವೇಂದ್ರ ಮಠ, ಮಲ್ಲನ ಮೂಲೆ ಮಠ ಸೇರಿದಂತೆ ವಿವಿಧೆಡೆ ಭಕ್ತರು ದೇವರ ದರ್ಶನಕ್ಕೆ ಮುಗಿಬಿದ್ದಿದ್ದಾರೆ.

Published On - 3:12 pm, Wed, 1 January 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us