AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ ಎಂದು ಪಿಯು ಬೋರ್ಡ್‌ ತಿಳಿಸಿದೆ. ಈ ಮೊದಲಿನ ವೇಳಾಪಟ್ಟಿಯಂತೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 7ರಿಂದ 18ರ ವರೆಗೂ ನಡೆಯಬೇಕಿತ್ತು. ಆದ್ರೆ ತಾಂತ್ರಿಕ ಕಾರಣಗಳಿಂದ ವೇಳಾಪಟ್ಟಿಯಲ್ಲಿ ಪರಿಷ್ಕರಣೆಯಾಗಿದೆ. ನೂತನ ವೇಳಾಪಟ್ಟಿಯಂತೆ ಪೂರಕ ಪರೀಕ್ಷೆ ಸೆಪ್ಟೆಂಬರ್ 7ರಿಂದ 19ರವರೆಗೂ ನಡೆಯಲಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಿಯು ಬೋರ್ಡ್‌ ನಿರ್ದೇಶಕಿ ಕನಗವಲ್ಲಿ, ನೂತನ ವೇಳಾಪಟ್ಟಿಯಂತೆಯೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳು ನೂತನ ವೇಳಾಪಟ್ಟಿಯನ್ನು […]

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ
ಪದವಿ ಪೂರ್ವ ಶಿಕ್ಷಣ ಇಲಾಖೆ
Guru
|

Updated on: Aug 19, 2020 | 7:53 PM

Share

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ ಎಂದು ಪಿಯು ಬೋರ್ಡ್‌ ತಿಳಿಸಿದೆ.

ಈ ಮೊದಲಿನ ವೇಳಾಪಟ್ಟಿಯಂತೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 7ರಿಂದ 18ರ ವರೆಗೂ ನಡೆಯಬೇಕಿತ್ತು. ಆದ್ರೆ ತಾಂತ್ರಿಕ ಕಾರಣಗಳಿಂದ ವೇಳಾಪಟ್ಟಿಯಲ್ಲಿ ಪರಿಷ್ಕರಣೆಯಾಗಿದೆ. ನೂತನ ವೇಳಾಪಟ್ಟಿಯಂತೆ ಪೂರಕ ಪರೀಕ್ಷೆ ಸೆಪ್ಟೆಂಬರ್ 7ರಿಂದ 19ರವರೆಗೂ ನಡೆಯಲಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಿಯು ಬೋರ್ಡ್‌ ನಿರ್ದೇಶಕಿ ಕನಗವಲ್ಲಿ, ನೂತನ ವೇಳಾಪಟ್ಟಿಯಂತೆಯೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳು ನೂತನ ವೇಳಾಪಟ್ಟಿಯನ್ನು ಗಮನಿಸಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ.

PU SUPPLYMENTARY FINAL T T2020-08-19 12.13.50