ಜಾಲತಾಣಗಳಲ್ಲಿ ಒಂಟಿ ಯುವತಿಯರ ಬೇಟೆ: ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಸೆರೆ

ಬೆಂಗಳೂರು:ಫೇಸ್ಬುಕ್ ಹಾಗೂ ಡೇಟಿಂಗ್ ಆ್ಯಪ್​ಗಳ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಹಣ ಪಡೆದುಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯ ನಿವಾಸಿ ಸುಹಾಸ್ ಹರಿಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಫೇಸ್ಬುಕ್ ಮತ್ತು ಡೇಟಿಂಗ್ ಆ್ಯಪ್​ಗಳ ಮುಖಾಂತರ, ಕೆಲಸಕ್ಕೆ ಹೋಗುತ್ತಿದ್ದ ಒಂಟಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ತದನಂತರ ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಲಕ್ಷಲಕ್ಷ ಹಣ ಪಡೆದು ವಂಚಿಸುತ್ತಿದ್ದ. ಇದೇ ರೀತಿಯಾಗಿ ಬೊಮ್ಮನಹಳ್ಳಿಯ ಯುವತಿಯಿಂದ 12 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿ, […]

ಜಾಲತಾಣಗಳಲ್ಲಿ ಒಂಟಿ ಯುವತಿಯರ ಬೇಟೆ: ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಸೆರೆ
ಸಾಧು ಶ್ರೀನಾಥ್​

Updated on: Aug 17, 2020 | 5:01 PM

ಬೆಂಗಳೂರು:ಫೇಸ್ಬುಕ್ ಹಾಗೂ ಡೇಟಿಂಗ್ ಆ್ಯಪ್​ಗಳ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಹಣ ಪಡೆದುಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರಹಳ್ಳಿಯ ನಿವಾಸಿ ಸುಹಾಸ್ ಹರಿಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಫೇಸ್ಬುಕ್ ಮತ್ತು ಡೇಟಿಂಗ್ ಆ್ಯಪ್​ಗಳ ಮುಖಾಂತರ, ಕೆಲಸಕ್ಕೆ ಹೋಗುತ್ತಿದ್ದ ಒಂಟಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ತದನಂತರ ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಲಕ್ಷಲಕ್ಷ ಹಣ ಪಡೆದು ವಂಚಿಸುತ್ತಿದ್ದ.

ಇದೇ ರೀತಿಯಾಗಿ ಬೊಮ್ಮನಹಳ್ಳಿಯ ಯುವತಿಯಿಂದ 12 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿ, ಬಳಿಕ ಫೇಸ್ಬುಕ್ನಲ್ಲಿ ಬೇರೊಂದು ಯುವತಿಯೊಂದಿಗೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ. ಈ ವಿಚಾರ ತಿಳಿದ ಸಂತ್ರಸ್ತೆ, ಯುವತಿಯನ್ನು ಭೇಟಿ ಮಾಡಿ ವಿಚಾರಿಸಿದ್ದಾರೆ. ವಿಚಾರಣೆಯ ವೇಳೆ ಸುಹಾಸ್ ಇನ್ನಿಬ್ಬರು ಯುವತಿಯರಿಗೆ ವಂಚಿಸಿ 1.40 ಲಕ್ಷ ಹಣವನ್ನು ಪಡೆದುಕೊಂಡಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಎಚ್ಚೆತ್ತುಕೊಂಡ ಸಂತ್ರಸ್ತ ಯುವತಿ, ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿ ಸುಹಾಸ್ ಹರಿಪ್ರಸಾದ್​ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾಗ, ಈ ಮೊದಲೆ ಸುಹಾಸ್​ಗೆ ಮದುವೆಯಾಗಿದ್ದು, ಸಂಸಾರ ನಡೆಸುತ್ತಿರುವುದು ತಿಳಿದು ಬಂದಿದೆ.

Published On - 4:53 pm, Mon, 17 August 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us