ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವನ ಮೇಲೆ ಚಿರತೆ ದಾಳಿ, ಅಪಾಯದಿಂದ ಯುವಕ ಪಾರು
ಬೆಳಗಾವಿ: ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ಯುವಕನ ಮೇಲೆ ಚಿರತೆ ದಾಳಿ ನಡೆಸಲು ಮುಂದಾಗಿದ್ದು, ಅದೃಷ್ಟವಶಾತ್ ಯುವಕ ಅಪಾಯದಿಂದ ಪಾರಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶ್ರೀಶೈಲಗೌಡ ಪಾಟೀಲ ಎಂಬಾತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಯುವಕ ಬಚಾವ್ ಆಗಿದ್ದಾನೆ. ನಿನ್ನೆಯಷ್ಟೇ ಅವರೊಳ್ಳಿ ಗ್ರಾಮದಲ್ಲಿ ಕುರಿಯ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬಂದಿದ್ದು, ಗ್ರಾಮದಲ್ಲೇ ಠಿಕಾಣಿ […]
ಬೆಳಗಾವಿ: ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ಯುವಕನ ಮೇಲೆ ಚಿರತೆ ದಾಳಿ ನಡೆಸಲು ಮುಂದಾಗಿದ್ದು, ಅದೃಷ್ಟವಶಾತ್ ಯುವಕ ಅಪಾಯದಿಂದ ಪಾರಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶ್ರೀಶೈಲಗೌಡ ಪಾಟೀಲ ಎಂಬಾತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದೆ.
ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಯುವಕ ಬಚಾವ್ ಆಗಿದ್ದಾನೆ. ನಿನ್ನೆಯಷ್ಟೇ ಅವರೊಳ್ಳಿ ಗ್ರಾಮದಲ್ಲಿ ಕುರಿಯ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬಂದಿದ್ದು, ಗ್ರಾಮದಲ್ಲೇ ಠಿಕಾಣಿ ಹೂಡಿದ್ದಾರೆ.