ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ.
ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.