
ಬೆಂಗಳೂರು: ಕ್ರೂರಿ ಕೊರೊನಾಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಚಿಕ್ಕಪೇಟೆಯ ಜೈನ್ ದೇವಸ್ಥಾನದ ಅರ್ಚಕ ಕೊರೊನಾದಿಂದ ಮೃತಪಟ್ಟಿದ್ದಾರೆ. 56 ವರ್ಷದ ಅರ್ಚಕ ಜ್ವರ ಕೆಮ್ಮು ನೆಗಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ನಂತರ ಇವರ ಗಂಟಲು ದ್ರವ ಸಂಗ್ರಹಿಸಿ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಅದರಲ್ಲಿ ಬಂದ ವರದಿಯಲ್ಲಿ ಕೊರೊನಾ ಇರುವುದು ಪತ್ತೆಯಾಗಿತ್ತು. ಮೊನ್ನೆ ಚಿಕಿತ್ಸೆ ಫಲಕಾರಿಯಾಗದೆ ಬೋರಿಂಗ್ ಆಸ್ಪತ್ರೆಯಲ್ಲಿ ಅರ್ಚಕ ಮೃತಪಟ್ಟಿದ್ದಾರೆ. ಅರ್ಚಕನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 10 ಜನರನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿದೆ. ಜೈನ ದೇವಸ್ಥಾನದ ರಸ್ತೆಯನ್ನು ಕಂಟೇನ್ಮೆಂಟ್ ಜೋನ್ ಆಗಿ ಮಾಡಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗುತ್ತಿದೆ.
Published On - 7:11 am, Thu, 18 June 20