AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಆಗ್ರಹಿಸಿ ಎಲ್ಲೆಡೆಯಿಂದ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ
ಸಿಎಂ ಬಿ.ಎಸ್​.ಯಡಿಯೂರಪ್ಪ
KUSHAL V
|

Updated on:Feb 05, 2021 | 10:19 PM

Share

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಆಗ್ರಹಿಸಿ ಎಲ್ಲೆಡೆಯಿಂದ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಿಎಂ ಸೂಚನೆ ಕೊಟ್ಟಿದ್ದಾರೆ.

ಇದರ ಜೊತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಯಡಿಯೂರಪ್ಪ ಸದನದಲ್ಲಿನ ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಅಪಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮೀಸಲಾತಿ ವಿಚಾರವಾಗಿ ಈಗಾಗಲೇ ಮುರುಗೇಶ್ ನಿರಾಣಿ, ಸಿ.ಸಿ. ಪಾಟೀಲ್ ಸೇರಿದಂತೆ ಸಮಾಜದ ಹಲವಾರು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಇಬ್ಬರು ಸ್ವಾಮೀಜಿಯವರನ್ನು ಮತ್ತು ಸಮಾಜದ ಮುಖಂಡರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಕಳುಹಿಸಿಕೊಟ್ಟಿದ್ದೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಅಧ್ಯಯನ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಹೇಳಿದ್ದಾರೆ.

ನಮ್ಮದೊಂದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಎಲ್ಲಾ‌ ಸಂಸದರ ಜೊತೆ ಚರ್ಚಿಸಿ ಬಳಿಕ ರಾಷ್ಟ್ರೀಯ ನಾಯಕರಿಗೆ ಈ ವಿಷಯದ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಅಧಿವೇಶನದಲ್ಲಿ ಹೇಳಿದ್ದೆ. ನಮ್ಮ ಸರ್ಕಾರ ಹಿಂದೆ ಪಂಚಮಸಾಲಿ ಸಮಾಜವನ್ನು 3Bಗೆ ಸೇರಿಸಿರುವುದನ್ನು ನೆನಪಿಸಿಕೊಳ್ಳಬಹುದು. ರಾಜ್ಯದ ಸಿಎಂ ಆಗಿ ಎಲ್ಲಾ ಸಮುದಾಯಗಳ ಒಳಿತಿಗೆ ನಾನು ಬದ್ಧ. ಇಂಥ ಗಂಭೀರ ವಿಷಯದ ಬಗ್ಗೆ ತರಾತುರಿಯಲ್ಲಿ ನಿರ್ಧಾರ ಆಗುವುದಿಲ್ಲ. ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಕೋರುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನ ಪರಿಷತ್​ ಸಭಾಪತಿ ಸ್ಥಾನಕ್ಕೆ ಮಂಗಳವಾರ ಚುನಾವಣೆ

Published On - 9:39 pm, Fri, 5 February 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!