ಇಂದು ಸಿಎಂ ಯಡಿಯೂರಪ್ಪ ಬೀದರ್, ಯಾದಗಿರಿ ಜಿಲ್ಲಾ ಪ್ರವಾಸ.. ಹೊಸ ಹೊಸ ಕಾಮಗಾರಿಗೆ ಚಾಲನೆ

| Updated By: ಸಾಧು ಶ್ರೀನಾಥ್​

Updated on: Jan 06, 2021 | 9:58 AM

ಇಂದು ಸಿಎಂ ಬಿಎಸ್ ಯಡಿಯೂರಪ್ಪ ಬೀದರ್ ಮತ್ತು ಯಾದಗಿರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಅನೇಕ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಹಾಗೂ ಹೊಸ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ.

ಇಂದು ಸಿಎಂ ಯಡಿಯೂರಪ್ಪ ಬೀದರ್, ಯಾದಗಿರಿ ಜಿಲ್ಲಾ ಪ್ರವಾಸ.. ಹೊಸ ಹೊಸ ಕಾಮಗಾರಿಗೆ ಚಾಲನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us on

ಬೀದರ್: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬೀದರ್ ಮತ್ತು ಯಾದಗಿರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಅನೇಕ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಹಾಗೂ ಹೊಸ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ.

ಸಿಎಂ ಬೆಳಗ್ಗೆ 10.15ಕ್ಕೆ ಬೀದರ್‌ ಏರ್‌ಬೇಸ್‌ಗೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 10.30ಕ್ಕೆ ಬೀದರ್‌ ಓಲ್ಡ್ ಸಿಟಿಯಲ್ಲಿರುವ ತಾಯಿ & ಮಕ್ಕಳ ಆರೈಕೆ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ನರ್ಸಿಂಗ್ ಕಾಲೇಜು, ಜಿಲ್ಲಾ ಕ್ರೀಡಾಂಗಣ, ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಬೀದರ್ ಏರ್‌ಬೇಸ್‌ನಿಂದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಬೆಳಸಿ ಬಸವಕಲ್ಯಾಣಕ್ಕೆ ತೆರಳಿ ₹600 ಕೋಟಿ ವೆಚ್ಚದಲ್ಲಿ ತಲೆ ಎತ್ತಲಿರುವ ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಉದ್ಯಾನವನ, ವಿವಿಧ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಯಾದಗಿರಿ ಜಿಲ್ಲೆಗೆ ಸಿಎಂ ಬಿಎಸ್‌ವೈ ಪ್ರಯಾಣ ಬೆಳೆಸಲಿದ್ದಾರೆ. ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ, ಅಭಿವೃದ್ಧಿ ಕೆಲಸಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ಯಾದಗಿರಿಯಿಂದ ಬೀದರ್‌ಗೆ ಬಂದು ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ರೀತಿ ಇಂದು ಅನೇಕ ಹೊಸ ಹೊಸ ಯೋಜನೆಗಳಿಗೆ ಚಾಲನೆ ಸಿಗಲಿದೆ.

ರಾಜಕಾರಣ | ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಮತ್ತು ಜೊಲ್ಲೆ ಕುಟುಂಬದ ನಡುವೆ ಜಾರಿಯಲ್ಲಿದೆ ಶೀತಲ ಸಮರ!

Published On - 7:15 am, Wed, 6 January 21