ರಾಜಧಾನಿಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ SMART City Rounds

| Updated By: ಸಾಧು ಶ್ರೀನಾಥ್​

Updated on: Jan 30, 2021 | 3:35 PM

ಮುಖ್ಯಮಂತ್ರಿಗಳು ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ನ್ಸ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ರಾಜಧಾನಿಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ SMART City Rounds
ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸುತ್ತಿರುವುದು.
Follow us on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ನ್ಸ್ ರಸ್ತೆ, ಫುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ 930 ಕೋಟಿ ರೂ.ಗಳು.

ಈ ವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ. ಉಳಿದ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ

Published On - 3:29 pm, Sat, 30 January 21