BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ
ಬಿಜೆಪಿ ಜತೆ ಜೆಡಿಎಸ್‌ನ್ನು ವಿಲೀನಗೊಳಿಸುವ ವರದಿ ಸುಳ್ಳು ಎಂದು ಸಿಎಂ ಯಡಿಯೂರಪ್ಪರಿಂದ ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ.
ಬೆಂಗಳೂರು: ಬಿಜೆಪಿ ಜತೆ ಜೆಡಿಎಸ್‌ನ್ನು ವಿಲೀನಗೊಳಿಸುವ ವರದಿ ಸುಳ್ಳು ಎಂದು ಸಿಎಂ ಯಡಿಯೂರಪ್ಪರಿಂದ ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ.
ಮಾನ್ಯ ಜಾತ್ಯಾತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದು ಸರಿಯಷ್ಠೆ. ಆದರೆ ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಕೇಳಿಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
BJP ಜೊತೆಗೆ ‘ಆ ಪಕ್ಷ’ ವಿಲೀನವಾಗುತ್ತಾ? ಶಾಸಕ ಲಿಂಬಾವಳಿಯಿಂದ ಸ್ಫೋಟಕ ಸುಳಿವು
Published On - 4:12 pm, Sun, 20 December 20