AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY

ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಹಾಗಾಗಿ,ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ ಎಂದು ಯಡಿಯೂರಪ್ಪ ಹೇಳಿದರು.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on:Jan 10, 2021 | 5:00 PM

Share

ದೆಹಲಿ: ಅಮಿತ್ ಶಾ, ನಡ್ಡಾ, ಅರುಣ್ ಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ. ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಮಾಹಿತಿ ನೀಡಿದ್ದೇನೆ. ಚುನಾವಣೆ ಫಲಿತಾಂಶದ ಅಂಕಿ-ಅಂಶ ನೀಡಿದ್ದೇನೆ. ಗ್ರಾ.ಪಂ. ಚುನಾವಣೆ ಫಲಿತಾಂಶ ಅವರಿಗೆ ಸಂತೋಷ ತಂದಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಉಪಚುನಾವಣೆ ಸಂಬಂಧವೂ ಚರ್ಚೆಯಾಯಿತು. 3 ಸ್ಥಾನಗಳಲ್ಲೂ ಗೆಲ್ಲಲೇಬೇಕೆಂದು ಸೂಚಿಸಿದ್ದಾರೆ. ಆದಷ್ಟು ಬೇಗ ಆಕಾಂಕ್ಷಿಗಳ ಪಟ್ಟಿ ಕಳಿಸಲು ಹೇಳಿದ್ದಾರೆ. ಪಟ್ಟಿ ಕಳಿಸಿದರೆ ಅಂತಿಮಗೊಳಿಸುವುದಾಗಿ ಹೇಳಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಜೊತೆಗೆ, ಸಮಾಧಾನಕರ ಹಾಗೂ ತೃಪ್ತಿಕರವಾದ ಚರ್ಚೆಗಳು ನಡೆದಿದೆ. ಈ ಸಭೆ ನನಗಂತೂ ಅತ್ಯಂತ ಸಂತೋಷ, ಸಮಾಧಾನ, ತೃಪ್ತಿ ತಂದಿದೆ. ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ. ಆದಷ್ಟು ಬೇಗ ಶುಭ ಸುದ್ದಿಯನ್ನು ಕೊಡುತ್ತಾರೆ. ರಾಷ್ಟ್ರ ನಾಯಕರು ಶುಭ ಸುದ್ದಿ ಕೊಡುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಷ್ಟ್ರ ನಾಯಕರ ಭೇಟಿ ಬಳಿಕ ನಾನು ಸಂತೋಷವಾಗಿದ್ದೇನೆ. ಹೀಗಾಗಿ, ಈಗ ಯತ್ನಾಳ್ ವಿಚಾರದ ಬಗ್ಗೆ ಮಾತಾಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿ ಸುಮ್ಮನಾದರು.

ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

Published On - 4:51 pm, Sun, 10 January 21

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!