ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ. ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ […]

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ
Follow us
ಆಯೇಷಾ ಬಾನು
|

Updated on:Jun 20, 2020 | 9:07 AM

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ.

ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ ಮಾಡಿಕೊಳ್ಳುವುದಾಗಿ ಬಹಿರಂಗ ಪತ್ರ ಬರೆದಿದೆ. ಅಡ್ಮಿಷನ್, ವಾಹನ ಶುಲ್ಕ ಪಾವತಿ ಮಾಡುವಂತೆ ಒತ್ತಾಯಪೂರ್ವಕವಾಗಿ ಶಾಲೆ ಆಡಳಿತ ಮಂಡಳಿ ವಸೂಲಿಗೆ ಮುಂದಾಗಿದೆ.

ಪೋಷಕರ ಅಭಿಪ್ರಾಯ ನೆಪದಲ್ಲಿ ಸಭೆ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಪೋಷಕರ ಅಭಿಪ್ರಾಯ ಸಂಗ್ರಹ ಮಾಡುವ ನೆಪದಲ್ಲಿ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹದ ಬದಲಿಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಮಂಡಿ ನೋವು ಸೇರಿದಂತೆ ಹಲವು ಕಾಯಿಲೆಗಳಿಗೆ ಔಷಧಗಳ ಬಗ್ಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಸುಮಾರು 300 ಪೋಷಕರನ್ನು ಒಂದೆಡೆ ಸೇರಿಸಿ ಮಾರ್ಕೆಟಿಂಗ್ ಮಾಡಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ನಟರನ್ನು ಕರೆಸಿ ಶಾಲೆಯಿಂದ ಮಾರ್ಕೆಟಿಂಗ್ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಸಂಸ್ಥೆ ಅಧ್ಯಕ್ಷ ಎಸ್.ವೈ.ಚಿಕ್ಕಟ್ಟಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ್ರು. ಇದನ್ನು ಡಿಡಿಪಿಐ ಗಮನಕ್ಕೆ ತಂದರೂ ಡೋಂಟ್‌ಕೇರ್. ಸರ್ಕಾರದ ಆದೇಶ ಉಲ್ಲಂಘಿಸಿದ್ರೂ ಜಿಲ್ಲಾಡಳಿತ ಮೌನವಾಗಿದೆ.

Published On - 8:13 am, Sat, 20 June 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್