ಸೋಮವಾರ ಬೆಳಗ್ಗೆ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ

| Updated By:

Updated on: Jun 07, 2020 | 8:15 PM

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಚಿರಂಜೀವಿ ಸರ್ಜಾ ಕುಟುಂಬಸ್ಥರು ಅರ್ಜುನ್ ಸರ್ಜಾ ಹಾಗೂ ಚಿರು ಅವರ ಅಜ್ಜಿಗಾಗಿ ಕಾಯುತ್ತಿದ್ದಾರೆ. ಸದ್ಯ ಅರ್ಜುನ್ ಸರ್ಜಾ ಚೆನ್ನೈನಲ್ಲಿದ್ದಾರೆ. ಅರ್ಜುನ್ ಸರ್ಜಾ ಬೆಂಗಳೂರಿಗೆ ಬರಲು 4 ಗಂಟೆ ಸಮಯಾವಕಾಶ ಬೇಕಾಗುತ್ತದೆ. ಹಾಗಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ಮಾಡಲು ಕುಟುಂಬ ಸಿದ್ಧತೆ ನಡೆಸುತ್ತಿದ್ದಾರೆ. ಚಿರಂಜೀವಿ ಸರ್ಜಾ ತಾತ […]

ಸೋಮವಾರ ಬೆಳಗ್ಗೆ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ
Follow us on

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಚಿರಂಜೀವಿ ಸರ್ಜಾ ಕುಟುಂಬಸ್ಥರು ಅರ್ಜುನ್ ಸರ್ಜಾ ಹಾಗೂ ಚಿರು ಅವರ ಅಜ್ಜಿಗಾಗಿ ಕಾಯುತ್ತಿದ್ದಾರೆ. ಸದ್ಯ ಅರ್ಜುನ್ ಸರ್ಜಾ ಚೆನ್ನೈನಲ್ಲಿದ್ದಾರೆ. ಅರ್ಜುನ್ ಸರ್ಜಾ ಬೆಂಗಳೂರಿಗೆ ಬರಲು 4 ಗಂಟೆ ಸಮಯಾವಕಾಶ ಬೇಕಾಗುತ್ತದೆ. ಹಾಗಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ಮಾಡಲು ಕುಟುಂಬ ಸಿದ್ಧತೆ ನಡೆಸುತ್ತಿದ್ದಾರೆ.

ಚಿರಂಜೀವಿ ಸರ್ಜಾ ತಾತ ಶಕ್ತಿಪ್ರಸಾದ್ ಅವರ ಸ್ವಗ್ರಾಮ ಜಕ್ಕೇನಹಳ್ಳಿ. ಹಾಗಾಗಿ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರವನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಗ್ರಾಮದಲ್ಲಿ ಮಾಡಲಿದ್ದಾರೆ ಎಂದು ಸರ್ಜಾ ಕುಟುಂಬ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 6:09 pm, Sun, 7 June 20