ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಬೆಂಗಳೂರಿನ 15 ಕಡೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಳ್ಳು ದಾಖಲೆ ನೀಡಿ, ಕೋಟಿ ಕೋಟಿ ಸಾಲ ಪಡೆದಿದ್ದವರ ಮನೆ ಮೇಲೆ ರೇಡ್ ಮಾಡಿದ್ದಾರೆ. ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ 15 ಕಡೆ ದಾಳಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಸಿಇಒ ವಾಸುದೇವ್ ಮಯ್ಯಾ ಆತ್ಮಹತ್ಯೆ […]

ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ

Updated on: Aug 04, 2020 | 7:45 AM

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಬೆಂಗಳೂರಿನ 15 ಕಡೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುಳ್ಳು ದಾಖಲೆ ನೀಡಿ, ಕೋಟಿ ಕೋಟಿ ಸಾಲ ಪಡೆದಿದ್ದವರ ಮನೆ ಮೇಲೆ ರೇಡ್ ಮಾಡಿದ್ದಾರೆ. ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ 15 ಕಡೆ ದಾಳಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಸಿಇಒ ವಾಸುದೇವ್ ಮಯ್ಯಾ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಸಾವಿನ ಬಳಿಕ ವಂಚನೆ ಪ್ರಕರಣ ಮತ್ತು ಆತ್ಮಹತ್ಯೆ ಎರಡು ಕೇಸ್ ತನಿಖೆ ನಡೆಸುವಂತೆ ಹೈ ಕೋರ್ಟ್ ಸಿಐಡಿಗೆ ಅದೇಶಿಸಿತ್ತು. ಸದ್ಯ ಸಿಐಡಿ ಸಾಲ ಪಡೆದು ಕಟ್ಟದವರ ಮನೆ ಸರ್ಚ್ ಮಾಡುತ್ತಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us