ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಜ್ಯದಲ್ಲೂ ವಿರೋಧ, ಮಂಗಳೂರಿನಲ್ಲಿ ಲಾಠಿಚಾರ್ಜ್​

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಪ್ರತಿಭಟನೆ ಭುಗಿಲೆದ್ದಿದೆ. ಪೊಲೀಸರ ಆದೇಶವನ್ನೂ ಲೆಕ್ಕಿಸದೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ಮಂಗಳೂರಿನಲ್ಲೂ ಸಹ ಅನುಮತಿ ಇಲ್ಲದೆ ಧರಣಿ ನಡೆಸುತ್ತಿದ್ದ ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಮಂಗಳೂರಿನ ಜ್ಯೋತಿ ಸರ್ಕಲ್‌ ಬಳಿ ರಸ್ತೆ ತಡೆದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಜ್ಯದಲ್ಲೂ ವಿರೋಧ, ಮಂಗಳೂರಿನಲ್ಲಿ ಲಾಠಿಚಾರ್ಜ್​

Updated on: Dec 16, 2019 | 6:32 PM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಪ್ರತಿಭಟನೆ ಭುಗಿಲೆದ್ದಿದೆ. ಪೊಲೀಸರ ಆದೇಶವನ್ನೂ ಲೆಕ್ಕಿಸದೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ಮಂಗಳೂರಿನಲ್ಲೂ ಸಹ ಅನುಮತಿ ಇಲ್ಲದೆ ಧರಣಿ ನಡೆಸುತ್ತಿದ್ದ ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಮಂಗಳೂರಿನ ಜ್ಯೋತಿ ಸರ್ಕಲ್‌ ಬಳಿ ರಸ್ತೆ ತಡೆದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ.

Published On - 6:26 pm, Mon, 16 December 19