ನಿಷೇಧಾಜ್ಞೆ ನಡುವೆಯೂ ಹೆಚ್ಚಿದ ಪೌರತ್ವದ ಕಿಚ್ಚು, ಹಲವರು ಪೊಲೀಸರ ವಶಕ್ಕೆ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದೆ. ಟೌನ್‌ಹಾಲ್ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಧರಣಿಗೆ ಮುಂದಾಗಿದ್ರು. ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೌನ್​ ಹಾಲ್​ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​ ನಿಯೋಜಿಸಲಾಗಿದೆ. ಸಿಎಎ ವಿರೋಧಿಸಿ ಪ್ರತಿಭಟನೆ ಮಾಡುವ ಸಾಧ್ಯತೆ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್​ರನ್ನು ಸಹ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಾಟಾಳ್ ನಿವಾಸಕ್ಕೆ ತೆರಳಿ ಸದಾಶಿವನಗರ ಪೊಲೀಸರು ಠಾಣೆಗೆ ಕರೆದುಕೊಂಡು […]

ನಿಷೇಧಾಜ್ಞೆ ನಡುವೆಯೂ ಹೆಚ್ಚಿದ ಪೌರತ್ವದ ಕಿಚ್ಚು, ಹಲವರು ಪೊಲೀಸರ ವಶಕ್ಕೆ

Updated on: Dec 19, 2019 | 11:52 AM

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದೆ. ಟೌನ್‌ಹಾಲ್ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಧರಣಿಗೆ ಮುಂದಾಗಿದ್ರು. ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೌನ್​ ಹಾಲ್​ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​ ನಿಯೋಜಿಸಲಾಗಿದೆ.

ಸಿಎಎ ವಿರೋಧಿಸಿ ಪ್ರತಿಭಟನೆ ಮಾಡುವ ಸಾಧ್ಯತೆ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್​ರನ್ನು ಸಹ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಾಟಾಳ್ ನಿವಾಸಕ್ಕೆ ತೆರಳಿ ಸದಾಶಿವನಗರ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಕಲಬುರಗಿ, ಹಾಸನ, ಕಲಬುರಗಿ ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಹಲವೆಡೆ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನಾ ಱಲಿಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.