ಜಿಲ್ಲಾಧಿಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ, ಏಕೆ?

ಬೆಳಗಾವಿ: ಕರ್ತವ್ಯನಿರತ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ಎಸ್‌ಬಿ ಬೊಮ್ಮನಹಳ್ಳಿ ನಿವಾಸದಲ್ಲಿ ನಡೆದಿದೆ. ಸಿಟಿ ರಿಜರ್ವ ಪೊಲೀಸ್ ಪೇದೆ ಪ್ರಕಾಶ್(30) ಭದ್ರತಾ ಸಿಬ್ಬಂದಿ ಕೊಠಡಿಯಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಒತ್ತಡ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾಸ್ಥಳದಲ್ಲೇ ತಾಯಿ ಆಕ್ರಂದನ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೇದೆ ಪ್ರಕಾಶ್ […]

ಜಿಲ್ಲಾಧಿಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ, ಏಕೆ?
ಸಾಧು ಶ್ರೀನಾಥ್​

Updated on: May 06, 2020 | 9:05 AM

ಬೆಳಗಾವಿ: ಕರ್ತವ್ಯನಿರತ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ಎಸ್‌ಬಿ ಬೊಮ್ಮನಹಳ್ಳಿ ನಿವಾಸದಲ್ಲಿ ನಡೆದಿದೆ. ಸಿಟಿ ರಿಜರ್ವ ಪೊಲೀಸ್ ಪೇದೆ ಪ್ರಕಾಶ್(30) ಭದ್ರತಾ ಸಿಬ್ಬಂದಿ ಕೊಠಡಿಯಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲಸದ ಒತ್ತಡ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನಾಸ್ಥಳದಲ್ಲೇ ತಾಯಿ ಆಕ್ರಂದನ:
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೇದೆ ಪ್ರಕಾಶ್ ತಾಯಿ ಮಗನನ್ನು ನೆನೆದು ಆಕ್ರಂದಿಸ್ತಿದ್ದಾರೆ. ಎಂತ ತಪ್ಪು ಮಾಡಿದೆ ಮಗನೇ ಎಂದು ಅಳುತ್ತಿದ್ದಾರೆ. ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಎರಡು ಮಕ್ಕಳಿರುವ ಪೇದೆ ಪ್ರಕಾಶ್ ಮನೆಗೆ ಹೋಗದೆ ಎರಡು ತಿಂಗಳಾಗಿತ್ತು.

ನಿರಂತರವಾದ ಕೊರೊನಾ ಡ್ಯೂಟಿಯಿಂದ ಮನೆಗೆ ಹೋಗಿರಲಿಲ್ಲ. ಕೆಲಸದ ಒತ್ತಡದಿಂದಲೇ ಪೇದೆ ಆತ್ಮಹತ್ಯೆಗೆ ಶರಣಾದ್ರ ಎಂಬ ಅನುಮಾನ ಹೆಚ್ಚಾಗಿದೆ. ಎಸ್‌ಎಲ್‌ಆರ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಪೇದೆ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 9:01 am, Wed, 6 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us