
ಬೆಂಗಳೂರು: ನಗರದ ಮಲ್ಲೇಶ್ವರಂ 14ನೇ ಕ್ರಾಸ್ನಲ್ಲಿರುವ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಕ್ಲಿನಿಕ್ನಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.