MG ರಸ್ತೆಯಲ್ಲಿ ಬೆಂಕಿಗೆ ಆಹುತಿಯಾದ ಬಟ್ಟೆ ಅಂಗಡಿ, ಲಕ್ಷಾಂತರ ರೂ. ಮೌಲ್ಯದ ಉಡುಪು ಭಸ್ಮ
ಚಿಕ್ಕಮಗಳೂರು: ನಗರದ ಎಂ.ಜಿ.ರಸ್ತೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಬಟ್ಟೆ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದೆ. ಪ್ರಕಾಶ್ ಎಂಬುವವರಿಗೆ ಸೇರಿದ್ದ ಬೆಲ್ಮೊಂಟ ಶಾಪ್ ಜವಳಿ ಅಂಗಡಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಇನ್ನು ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗೆ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಅವಘಡದಿಂದ ಶಾಪ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಉಡುಪುಗಳು ಭಸ್ಮವಾಗಿದೆ.
ಚಿಕ್ಕಮಗಳೂರು: ನಗರದ ಎಂ.ಜಿ.ರಸ್ತೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಬಟ್ಟೆ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದೆ. ಪ್ರಕಾಶ್ ಎಂಬುವವರಿಗೆ ಸೇರಿದ್ದ ಬೆಲ್ಮೊಂಟ ಶಾಪ್ ಜವಳಿ ಅಂಗಡಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಇನ್ನು ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗೆ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಅವಘಡದಿಂದ ಶಾಪ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಉಡುಪುಗಳು ಭಸ್ಮವಾಗಿದೆ.
Published On - 2:49 pm, Sun, 26 July 20