ಚಿತ್ರದುರ್ಗದಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ: ಸಿಎಂ BSY ಲೋಕಾರ್ಪಣೆ

ಚಿತ್ರದುರ್ಗದಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ: ಸಿಎಂ BSY ಲೋಕಾರ್ಪಣೆ

ಚಿತ್ರದುರ್ಗ: ಕೊರೊನಾ ಸೋಂಕಿತರ ಚಿಕಿತ್ಸೆಗೆ ನೆರವಾಗಲೆಂದು ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆ & ಮೆಡಿಕಲ್ ಕಾಲೇಜಿನಲ್ಲಿ ನಿರ್ಮಿಸಿರುವ ಕೋವಿಡ್ ಪರೀಕ್ಷಾ ಕೇಂದ್ರವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದಾರೆ.

ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಘುಮೂರ್ತಿ, ಎಂಎಲ್ ಸಿ ರಘುಆಚಾರ್ ಭಾಗಿಯಾಗಿದ್ದರು.

ಎಸ್.ಜೆ.ಎಂ. ವಿದ್ಯಾಪೀಠದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ನಿರ್ಮಿಸಲಾಗಿರುವ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.

Click on your DTH Provider to Add TV9 Kannada