ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ ಸೇರಿಸಲು ಪ್ಲ್ಯಾನ್, ಸಚಿವ ಸಂಪುಟ ಸಭೆಯಲ್ಲಿಂದು ತೀರ್ಮಾನ..

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿದ್ಧ ಸಿಎಂ ಯಡಿಯೂರಪ್ಪ ಈಗ ಮತ್ತೊಂದು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.‌ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರಿಸಲು ಶಿಫಾರಸು ಮಾಡುವ ತೀರ್ಮಾನ ಹೊರಬೀಳಲಿದೆ.

ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ ಸೇರಿಸಲು ಪ್ಲ್ಯಾನ್, ಸಚಿವ ಸಂಪುಟ ಸಭೆಯಲ್ಲಿಂದು ತೀರ್ಮಾನ..
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ಆಯೇಷಾ ಬಾನು
|

Updated on:Nov 27, 2020 | 7:33 AM

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿದ್ಧ ಸಿಎಂ ಯಡಿಯೂರಪ್ಪ ಈಗ ಮತ್ತೊಂದು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.‌ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರಿಸಲು ಶಿಫಾರಸು ಮಾಡುವ ತೀರ್ಮಾನ ಹೊರಬೀಳಲಿದೆ. ಇದರ ಜೊತೆಗೆ ಸಿಎಂ ಇಂದು ಬಿಜೆಪಿ ಸಂಸದರ ಸಭೆಯನ್ನೂ ನಡೆಸಲಿದ್ದಾರೆ.

ಲಿಂಗಾಯತ ಸಮಾಜಕ್ಕೆ ಶೇಕಡ16ರಷ್ಟು ಮೀಸಲಾತಿ ನೀಡಿ: ಇತ್ತ ವೀರಶೈವ ಲಿಂಗಾಯತ ಸಮಾಜಕ್ಕೆ ಶೇಕಡ16ರಷ್ಟು ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಅಲ್ಲದೆ ಎಲ್ಲಾ ಲಿಂಗಾಯತ ಮುಖಂಡರು ಇದೇ ಬೇಡಿಕೆಯನ್ನು ಸಿಎಂ ಮುಂದಿಟ್ಟಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಕೇಂದ್ರಕ್ಕೆ ಶಿಫಾರಸು? ಕಳೆದ ವಾರವಷ್ಟೇ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂಪಾಯಿ ಅನುದಾನ ಮೀಸಲಿರಿಸಿದ್ದ ಸಿಎಂ ಈಗ ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಬಹು ದಿನಗಳ ಬೇಡಿಕೆಯಾದ ಕೇಂದ್ರದ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಲು ಶಿಫಾರಸು ಮಾಡಲು ಚಿಂತಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ವೀರಶೈವ ಲಿಂಗಾಯತಕ್ಕೆ ನೇರ ಮೀಸಲಾತಿ ನೀಡುವ ಪ್ರಯತ್ನ ಮಾಡಿದ್ದರು. ಆದರೆ ಸಿದ್ದರಾಮಯ್ಯರ ಪ್ರಯತ್ನವನ್ನು ಕೇಂದ್ರವು ಎರಡು ಬಾರಿ ನಿರಾಕರಿಸಿತ್ತು.

ಸದ್ಯ ಈಗ ಕೇಂದ್ರದ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಲು ಶಿಫಾರಸು ಮಾಡವ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಹೊರಬೀಳೋ ಸಾಧ್ಯತೆಯಿದೆ. ಇದಕ್ಕೂ ಮುನ್ನ ನಿನ್ನೆ ಲಿಂಗಾಯತ ಸಚಿವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಕರೆಸಿಕೊಂಡಿದ್ದ ಸಿಎಂ ಸಾಧಕ ಬಾಧಕಗಳ ಚರ್ಚೆ ನಡೆಸಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಖುದ್ದು ಸಿಎಂ ಶಿಫಾರಸು ವಿಚಾರವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ ಎನ್ನಲಾಗ್ತಿದೆ.

ಬಿಜೆಪಿ ಸಂಸದರ ಸಭೆ ಕರೆದ ಸಿಎಂ ಬಿಎಸ್‌ವೈ: ಇನ್ನು ಇಂದು‌ ಸಿಎಂ ಯಡಿಯೂರಪ್ಪ ಬಿಜೆಪಿ ಸಂಸದರ ಸಭೆ ನಡೆಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ‌ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ಕುರಿತಾಗಿ ಸಂಸದರ ಜೊತೆ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಆದರೆ ಇಂದಿನ ಸಭೆಯ ಹಿಂದೆ ಯಡಿಯೂರಪ್ಪ ಸಂಸದರನ್ನು ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳುವ ರಹಸ್ಯ ಕಾರ್ಯಸೂಚಿ‌ ಅಡಗಿದೆ. ಆದರೆ ಇಂದಿನ ಸಭೆಯಲ್ಲಿ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಬಿಜೆಪಿ ಗ್ರಾಮ ಸ್ವರಾಜ್ಯ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಭಾಗವಹಿಸುತ್ತಿಲ್ಲ.

ಸಂಸದ ಮತ್ತು ಕೇಂದ್ರ ಸಚಿವ ಡಿ.ವಿ. ಸದಾನಂದ ‌ಗೌಡ ಕೋವಿಡ್ ಸೋಂಕಿಗೊಳಗಾಗಿರುವ ಕಾರಣ ಪಾಲ್ಗೊಳ್ಳುತ್ತಿಲ್ಲ. ಸಂಸದ ಮತ್ತು ಬಿಜೆಪಿ ಯುವ ಮೋರ್ಛಾ ಅಧ್ಯಕ್ಷ ತೇಜಸ್ವಿ ಸೂರ್ಯ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಚೇರಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಭಾಗವಹಿಸುತ್ತಿಲ್ಲ.

ಒಂದೆಡೆ ಸಚಿವರು ದೆಹಲಿಗೆ ಹಾರಿದ್ರೆ, ಇತ್ತು ಸಿಎಂ ಬಿಎಸ್​ವೈ ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಒಟ್ನಲ್ಲಿ ಸಿಎಂ ಯಡಿಯೂರಪ್ಪ ತಮ್ಮನ್ನು ‌ತಾವು ಗಟ್ಟಿಪಡಿಸಿಕೊಳ್ಳುವ ಯತ್ನವನ್ನು ಸತತವಾಗಿ ಮುಂದುವರಿಸುತ್ತಲೇ ಇದ್ದಾರೆ.‌ ಅದಕ್ಕಾಗಿ‌ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕೇಂದ್ರ ಒಬಿಸಿ ಪಟ್ಟಿಗೆ ಶಿಫಾರಸು, ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಎಲ್ಲವೂ ನಿರಂತರವಾಗಿ ಸಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ಮುಂದಿನ ನಡೆ: ವೀರಶೈವ ಲಿಂಗಾಯತರಿಗೆ ಶೇ 16 ಮೀಸಲಾತಿ ಮತ್ತು ಒಕ್ಕಲಿಗ ಅಭಿವೃದ್ಧಿ ನಿಗಮ?

Published On - 7:31 am, Fri, 27 November 20

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ