AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಅರುಣ್​ ಸಿಂಗ್, ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿತ್ತು

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಕುರಿತು ಹಲವಾರು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ, ಏನಾಗುತ್ತದೆ ನೋಡೋಣ ಎಂದು ಹೇಳಿದ್ದಾರೆ.

Follow us
Ganapathi Sharma
|

Updated on:Mar 09, 2023 | 11:05 PM

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಿಜೆಪಿ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಈ ಕುರಿತು ಹಲವಾರು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ, ಏನಾಗುತ್ತದೆ ನೋಡೋಣ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವುದು ಕೇಂದ್ರ ಸರ್ಕಾರ. ಕೇಂದ್ರದಲ್ಲಿ ನಮ್ಮದೇ ಸರ್ಕಾರವಿದೆ. ಕಾಮಗಾರಿ ಆರಂಭ ಹಾಗೂ ಹಣ ಬಿಡುಗಡೆ ಬಗ್ಗೆ ದಾಖಲೆಗಳಿವೆ. ಕಾಂಗ್ರೆಸ್ ನಾಯಕರು ಪ್ರಸ್ತಾವನೆ ಕಳಿಸಿದ್ದ ಬಗ್ಗೆ ಮಾತನಾಡುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಪ್ರಸ್ತಾವನೆ ಇದೆ, ಅದು ಇವತ್ತಿನದಲ್ಲ. ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕಿಂತಲೂ ಮೊದಲಿನಿಂದಲೂ ಪ್ರಸ್ತಾವನೆ ಇದೆ. ನೈಸ್ ರಸ್ತೆ ಪ್ರಸ್ತಾವನೆ ವಿಫಲವಾದಾಗ ಇದು ಮತ್ತೆ ಮುನ್ನೆಲೆಗೆ ಬಂದಿತ್ತು. ಇದರ ಇತಿಹಾಸ ಗೊತ್ತಿದ್ದವರಿಗೆ ಮಾತ್ರ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ; ಅರುಣ್ ಸಿಂಗ್

ಬಿಜೆಪಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿಗೆ ಬಂದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಇದೇ ವೇಳೆ, ಸುಮಲತಾ ಅಂಬರೀಶ್ ಬಿಜೆಪಿ ಸೇರುವ ಬಗ್ಗೆ ಪರೋಕ್ಷ ಸುಳಿವು ನೀಡಿದರು. ಬಿಜೆಪಿ ಸೇರುವವರ ಸಂಖ್ಯೆ ಈಗ ಹೆಚ್ಚಾಗಿದೆ. ಇನ್ನೂ ಸಾಕಷ್ಟು ನಾಯಕರು ಪಕ್ಷವನ್ನು ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುಮಲತಾ ಅಂಬರೀಶ್​ ಬಿಜೆಪಿ ಸೇರಿದ್ರೆ ಸಂಸದೆ ಸ್ಥಾನದಿಂದ ಅನರ್ಹ ? ಕಮಲ ಮುಡಿಯಲು ಹೊರಟ ಮಂಡ್ಯ ಗೌಡ್ತಿಗೆ ಕಾನೂನು ತೊಡಕು!

ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ರೋಡ್ ಶೋ ನಡೆಸಲಿದ್ದಾರೆ. ಮೋದಿಯವರು ಪ್ರಪಂಚದ ಜನಪ್ರಿಯ ನಾಯಕ. ಪ್ರಧಾನಿ ಬರುತ್ತಿರುವುದು ನಮ್ಮ ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ತುಂಬಲಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಸುಮಲತಾ ನಾಳೆಯ ದಿನಚರಿ ಹೀಗಿದೆ…

ಸುಮಲತಾ ಅಂಬರೀಶ್ ಶುಕ್ರವಾರ ಬೆಳಗ್ಗೆ 9.30ಕ್ಕೆ ರಸ್ತೆ ಮಾರ್ಗವಾಗಿ ಬೆಂಗಳೂರಿನಿಂದ ಮಂಡ್ಯದತ್ತ ಹೊರಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ಸಂಸದರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಸದ್ಯ ಸುಮಲತಾ ಅವರು ಪ್ರೇಸ್ಟಿಜ್ ಅಪಾರ್ಟ್​​ಮೆಂಟ್​​ನಲ್ಲಿ ಇದ್ದಾರೆಯೇ ಅಥವಾ ಖಾಸಗಿ ಹೋಟೆಲ್​ನಲ್ಲಿ ಇದ್ದಾರೆಯೇ ಎಂಬ ಮಾಹಿತಿ ತಿಳಿದುಬಂದಿಲ್ಲ.

ಸುಮಲತಾ ಬಿಜೆಪಿ ಸೇರಿದರೆ ಜೆಡಿಎಸ್​​ಗೆ ಲಾಭವೇ?

ಸುಮಲತಾ ರಾಜ್ಯ ರಾಜಕಾರಣಕ್ಕೆ ಬಂದು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿದರೆ ಎದುರಾಳಿಯಾಗಿ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಒಂದು ವೇಳೆ ಇದು ನಿಜವಾದಲ್ಲಿ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನ ಅನುಕಂಪ ಜೆಡಿಎಸ್​ಗೆ ದೊರೆಯಲಿದೆ. ಸುಮಲತಾ ಸಾಮಾನ್ಯ ಜನರ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳೂ ಜೆಡಿಎಸ್​ಗೆ ವರದಾನವಾಗುವ ಸಾಧ್ಯತೆ ಇದೆ. ಅಂಬರೀಶ್ ಪರ ಅಲೆ ಈ ಹಿಂದಿನಷ್ಟು ಇಲ್ಲದಿರುವುದು ಸುಮಲತಾ ಅವರ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಮೂಲಗಳು ಹೇಳಿವೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:25 pm, Thu, 9 March 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್