ಮಗುವಿಗೆ ಕಾಯಿಲೆ: ಮಹಿಳೆಯ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಏನು ಮಾಡಿದರು ಗೊತ್ತಾ?

| Updated By: ಸಾಧು ಶ್ರೀನಾಥ್​

Updated on: Jun 21, 2022 | 7:04 PM

Basavaraj Bommai: ತಾವು ಕೊಟ್ಟ ಭರವಸೆಯನ್ನು ರಾಜಕೀಯ ಭರವಸೆಗೆ ಸೀಮಿತಗೊಳಿಸಿದೆ ಕೇವಲ 2 ಗಂಟೆಗಳಲ್ಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಂಬಂಧಪಟ್ಟ ಆಸ್ಪತ್ರೆಗೆ ಪತ್ರ ಬರೆಯುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು. ಅದರಂತೆ, ಧಾರವಾಡದ ಎಸ್​ಡಿಎಂ ಆಸ್ಪತ್ರೆಗೆ ಪತ್ರ ಬರೆಯಲಾಗಿದೆ.

ಮಗುವಿಗೆ ಕಾಯಿಲೆ: ಮಹಿಳೆಯ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಏನು ಮಾಡಿದರು ಗೊತ್ತಾ?
ಮಹಿಳೆಯ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಏನು ಮಾಡಿದರು ಗೊತ್ತಾ?
Follow us on

ಬೆಂಗಳೂರು: ಮಹಿಳೆಯ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (CM Basavaraj Bommai) ಮಗುವಿಗೆ ದೃಷ್ಟಿದೋಷ ಮತ್ತು ಮೆದುಳು ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ನೆರವಾಗಿದ್ದಾರೆ. ಮಗು ಕೃಷ್ಣವೇಣಿ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ ಎಂದು ಮಗುವಿನ ತಾಯಿ (Mother) ಸಿಎಂ ಬೊಮ್ಮಾಯಿ ಬಳಿ ಅಳಲು ತೋಡಿಕೊಂಡಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಬಸವರಾಜ ಬೊಮ್ಮಾಯಿ ಅವರು ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು (child treatment) ಭರಿಸುವ ಭರವಸೆ ನೀಡಿದರು.

ಇನ್ನು ತಾವು ಕೊಟ್ಟ ಭರವಸೆಯನ್ನು ರಾಜಕೀಯ ಭರವಸೆಗೆ ಸೀಮಿತಗೊಳಿಸಿದೆ ಕೇವಲ 2 ಗಂಟೆಗಳಲ್ಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಂಬಂಧಪಟ್ಟ ಆಸ್ಪತ್ರೆಗೆ ಪತ್ರ ಬರೆಯುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು. ಅದರಂತೆ, ಧಾರವಾಡದ ಎಸ್​ಡಿಎಂ ಆಸ್ಪತ್ರೆಗೆ (Dharwad SDM Hospital) ಪತ್ರ ಬರೆಯಲಾಗಿದೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (Chief Minister Relief Fund) ವೆಚ್ಚವನ್ನು ಸಂಪೂರ್ಣವಾಗಿ ಭರಿಸಲಾಗುವುದು. ಮಗುವಿಗೆ ಸಂಪೂರ್ಣವಾದ ಚಿಕಿತ್ಸೆ ನೀಡಿದ ನಂತರ ಸರ್ಕಾರಕ್ಕೆ ಬಿಲ್ ಗಳನ್ನು ಸಲ್ಲಿಸುವಂತೆ ಪತ್ರದಲ್ಲಿ ಎಸ್​ಡಿಎಂ ಆಸ್ಪತ್ರೆಗೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಈ ಸ್ಪಂದನೆಗೆ ಮಗುವಿನ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಇದುವರೆಗೂ ಆರ್​ ಟಿ ನಗರದಲ್ಲಿ ತಮ್ಮ ನಿವಾಸದಲ್ಲಿ ಸಾವಿರಾರು ಜನರ ಜನತಾ ದರ್ಶನ ಮಾಡಿರುವ ಸಿಎಂ ಬೊಮ್ಮಾಯಿ, ಇದೇ ಮೊದಲ ಬಾರಿಗೆ ಕೂಡಲೇ ಸ್ಪಂದಿಸಿದ್ದಾರೆ.

ಕೊಪ್ಪಳ ಯುವಕನ ಬೇಡಿಕೆಗೆ ಇತ್ತೀಚೆಗೆ ಸ್ಪಂದಿಸಿದ್ದ ಸಿಎಂ ಬೊಮ್ಮಾಯಿ

ವಿಶೇಷ ಚೇತನ ಯುವಕನ ಬೇಡಿಕೆಗೆ ಮುಖ್ಯಮಂತ್ರಿ ಬಸವ್ರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಹೀಗೆಯೇ ಯುವಕನೊಬ್ಬನ ನೆರವಿಗೆ ಧಾವಿಸಿದ್ದರು. ಹೊಸ ತ್ರಿಚಕ್ರ ವಾಹನ ಕೊಡಿಸುವಂತೆ ಸಿಎಂ ಬೊಮ್ಮಾಯಿಗೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಅಡವಿಬಾವಿ ಗ್ರಾಮದ ನಿವಾಸಿ ಶಿವಪ್ಪ ಮನವಿ ಮಾಡಿದ್ದ. ಅಂದು ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಮುಗಿಸಿ ಹೊರಬರುತ್ತಿದ್ದಾಗ ಅಡವಿಬಾವಿ ಗ್ರಾಮದ ಶಿವಪ್ಪ ಸಿಎಂಗೆ ಮನವಿ ಮಾಡಿದ್ದ.

ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಮಾತನಾಡುವಾಗ ತನ್ನ ತ್ರಿಚಕ್ರ ವಾಹನ ಅಪಘಾತಕ್ಕೀಡಾಗಿ ನಜ್ಜುಗುಜ್ಜಾದ ಬಗ್ಗೆ ಮಾಹಿತಿ ನೀಡಿದ್ದ. ಯುವಕನ‌ ಮನವಿಗೆ ತಕ್ಷಣ ಸ್ಪಂದಿಸಿದ ಸಿಎಂ ಬೊಮ್ಮಾಯಿ ಕೊಪ್ಪಳ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ, ಶಿವಪ್ಪನಿಗೆ ಹೊಸ ತ್ರಿಚಕ್ರ ವಾಹನ ಕೊಡಿಸುವಂತೆ ಸೂಚನೆ ನೀಡಿದ್ದರು.

Yoga in Hampi: ಹಂಪಿಯಲ್ಲಿ ಯೋಗ ಮಾಡಿ ಬೆನ್ನು ನೋವು, ಮೈ ಕೈ ಕೀಲು ನೋವು ಬಂದಿದೆ ಎಂದ ಮಂಜಮ್ಮ ಜೋಗತಿ!

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Tue, 21 June 22