Shivamogga Blast ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಹುಣಸೋಡು ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಬೆಂಗಳೂರಿನಲ್ಲಿ ಸಿಎಂ B.S.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ: ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ B.S.ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ. ಈ ದುರ್ಘಟನೆಯಲ್ಲಿ ಇದುವರೆಗೆ ಐವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಬೆಂಗಳೂರಿನಲ್ಲಿ ಸಿಎಂ BS ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ನಾಳೆ ನಾನು ಹುಣಸೋಡಿಗೆ ತೆರಳಿ ಪರಿಶೀಲಿಸುತ್ತೇನೆ. ಸುತ್ತಮುತ್ತಲ ಗ್ರಾಮಸ್ಥರ ಜತೆಯೂ ಚರ್ಚೆ ನಡೆಸ್ತೇನೆ. ತನಿಖೆ ಆಗಿ ವರದಿ ಬಂದ ಬಳಿಕ ಏನೆಂದು ಗೊತ್ತಾಗುತ್ತೆ. ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕೈಗೊಂಡಿದ್ದೇವೆ. ನಮಗೆ ಮಾಹಿತಿ ತಿಳಿದ ತಕ್ಷಣ 3-4 ಗಣಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ರು.
ಸ್ಫೋಟ ಪ್ರಕರಣ ಸಂಬಂಧ ಸಿಎಂ ಹೈಅಲರ್ಟ್ ಇನ್ನು ಸಿಎಂ ಕೆಲ ಕಾರಣಗಳಿಂದ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ದುರಂತ ಸ್ಥಳಕ್ಕೆ ತೆರಳಿ ಪರಿಶೀಲಿಸಲು ಗಣಿ ಸಚಿವ ಮುರುಗೇಶ್ ನಿರಾಣಿಗೆ ಬಿಎಸ್‌ವೈ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತದ ಜತೆ ನಿರಂತರ ಮಾತು ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ ಬಗ್ಗೆ ವಿಚಾರಣೆ ನಡೆಸಲು ಸೂಚಿಸಿದ್ದಾರೆ. ತವರು ಜಿಲ್ಲೆಯಲ್ಲಿ ನಡೆದ ದುರಂತದ ಬಗ್ಗೆ ಸಿಎಂ ಅಲರ್ಟ್ ಆಗಿದ್ದಾರೆ.