PM Svanidhi Scheme ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ: ಬ್ಯಾಂಕ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ

| Updated By: ಸಾಧು ಶ್ರೀನಾಥ್​

Updated on: Feb 11, 2021 | 1:18 PM

CM BS Yediyurappa Become Anger | ಸಿಎಂ ಬಿ.ಎಸ್.ಯಡಿಯೂರಪ್ಪ ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ ನಡೆಸುವವೇಳೆ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ಕೆಂಡಾಮಂಡಲರಾಗಿದ್ದಾರೆ.

PM Svanidhi Scheme ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ: ಬ್ಯಾಂಕ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us on

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ ನಡೆಸುವವೇಳೆ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ಕೆಂಡಾಮಂಡಲರಾಗಿದ್ದಾರೆ. ಸಾಲ ನೀಡುವುದರಲ್ಲಿ ಕರ್ನಾಟಕ 5ನೇ ಸ್ಥಾನದಲ್ಲಿ ಇದೆ. ಬ್ಯಾಂಕ್‌ಗಳು ಸಾಲ ನೀಡುತ್ತಿಲ್ಲವೆಂದು ದೂರು ಬಂದಿದೆ. ಅಂಕಿ-ಅಂಶವೂ ಸಾಲ ಸರಿಯಾಗಿ ನೀಡ್ತಿಲ್ಲವೆಂದು ಹೇಳ್ತಿದೆ. ನಿಮ್ಮ ಈ ವರ್ತನೆ ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಲೋನ್ ನೀಡದ ವಿಚಾರ ಗಮನಕ್ಕೆ ಬಂದರೆ ಸಹಿಸುವುದಿಲ್ಲ
ಇನ್ನು ಇದೇ ವೇಳೆ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಿಎಂ ಸ್ವನಿಧಿ ಯೋಜನೆಯಲ್ಲಿ ಮೊದಲ ಸ್ಥಾನಕ್ಕೆ ಬರಬೇಕು. ಫೆಬ್ರವರಿ ಅಂತ್ಯ ವೇಳೆಗೆ ಎಲ್ಲ ಸರಿ ಮಾಡಬೇಕು. ಇದಕ್ಕೆ ಬ್ಯಾಂಕ್‌ಗಳು ಅಗತ್ಯವಾದ ಕ್ರಮ ತೆಗೆದುಕೊಳ್ಳಬೇಕು. ಪ್ರಾಮಾಣಿಕವಾಗಿ ಲೋನ್ ಕೊಡುವ ಕೆಲಸ ಮಾಡಿ. ಲೋನ್ ನೀಡದ ವಿಚಾರ ಗಮನಕ್ಕೆ ಬಂದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಬೆಳಗ್ಗೆಯೇ ಬ್ಯಾಂಕ್ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

ಇದನ್ನೂ ಓದಿ: ಅನೈತಿಕ ಮೈತ್ರಿ ಸರ್ಕಾರ ಮಾಡಿದ್ದವರು ನೀವು: ಸಿದ್ದರಾಮಯ್ಯಗೆ ಯಡಿಯೂರಪ್ಪ ತಿರುಗೇಟು