ಕೊರೊನಾ ಆತಂಕದ ನಡುವೆ ಸರಳ ರಾಜ್ಯೋತ್ಸವ, ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ಹಬ್ಬಕ್ಕೆ ಸಿಎಂ ಚಾಲನೆ

  • Updated On - 10:13 am, Sun, 1 November 20
ಕೊರೊನಾ ಆತಂಕದ ನಡುವೆ ಸರಳ ರಾಜ್ಯೋತ್ಸವ, ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ಹಬ್ಬಕ್ಕೆ ಸಿಎಂ ಚಾಲನೆ

ಬೆಂಗಳೂರು: ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳವಾಗಿ ಕನ್ನಡ ಹಬ್ಬವನ್ನ ಆಚರಿಸಲಾಗ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ಮಾಡಿದ್ರು. ಹಾಗೂ ಸಚಿವ ಸುರೇಶ್ ಕುಮಾರ್ ನಾಡಧ್ವಜರೋಹಣ ಮಾಡಿದ್ರು. ಈ ವೇಳೆ ಸ್ಥಳೀಯ ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ರು.

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾ ಬಳಿ ಬೈಕ್ ಱಲಿಗೆ ಬಿಎಸ್‌ವೈ ಚಾಲನೆ ನೀಡಿದ್ರು. ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಸಿಎಂ ಬಿಎಸ್‌ವೈ ಕನ್ನಡದ ಉಳಿವಿಗಾಗಿ ಹೆಚ್ಚು ಕನ್ನಡ ಭಾಷೆಯನ್ನು ಬಳಸಬೇಕು. ದೈನಂದಿನ ಜೀವನದಲ್ಲಿ ಕನ್ನಡ ಮಾತಾಡಬೇಕು, ಬರೆಯಬೇಕು. ಮನೆಗಳಲ್ಲಿ ಮಕ್ಕಳ ಜತೆ ಕನ್ನಡದಲ್ಲಿಯೇ ಮಾತನಾಡಿ. ಪ್ರಧಾನಿ ಮೋದಿ ಸಹ ಕನ್ನಡಿಗರಿಗೆ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿಗೆ ಕನ್ನಡಿಗರ ಪರವಾಗಿ ಅಭಿನಂದನೆ ಸಲ್ಲಿಸ್ತೇನೆ ಎಂದು ಹೇಳೀದ್ರು.

ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದಕ್ಕೆ ಮುಂದಿನ ವರ್ಷ ‘ಕನ್ನಡ ಕಾಯಕ ವರ್ಷ’ ಕಾರ್ಯಕ್ರಮ ಮಾಡಲಾಗುತ್ತೆ. ‘ಕನ್ನಡ ಕಾಯಕ ವರ್ಷ’ಕ್ಕೆ ರೂಪರೇಷೆ ಸಿದ್ಧಪಡಿಸಲಾಗುವುದು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Published On - 9:39 am, Sun, 1 November 20

Click on your DTH Provider to Add TV9 Kannada