ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದ ಮಂಗಲಭವನದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪೂರ್ಣಾಹುತಿ ಸಮರ್ಪಿಸಿದರು. ಸಿಎಂಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ K.C. ನಾರಾಯಣಗೌಡ ಸಾಥ್ ನೀಡಿದರು. ತಾಲೂಕಿನ ವಿವಿಧ ಸಮೂದಾಯದವರ ಜೊತೆಗೂಡಿ ಕೊರೊನಾ ಸೇರಿದಂತೆ ವಿವಿಧ ಸಮಸ್ಯೆಗಳ ಶಮನಕ್ಕೆ ಇಂದು ಚಂಡಿಕಾ ಹೋಮ ಹವನ ನಡೆಸಲಾಯಿತು ಎಂದು ತಿಳಿದುಬಂದಿದೆ. ಶಿಕಾರಿಪುರದಲ್ಲಿಂದು ಸಿಎಂ BSYರ ಪ್ರವಾಸದ ಎರಡನೇ ದಿನವಾಗಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು. ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿ ಅಭಿವೃದ್ಧಿ […]
Follow us on
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದ ಮಂಗಲಭವನದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪೂರ್ಣಾಹುತಿ ಸಮರ್ಪಿಸಿದರು. ಸಿಎಂಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ K.C. ನಾರಾಯಣಗೌಡ ಸಾಥ್ ನೀಡಿದರು. ತಾಲೂಕಿನ ವಿವಿಧ ಸಮೂದಾಯದವರ ಜೊತೆಗೂಡಿ ಕೊರೊನಾ ಸೇರಿದಂತೆ ವಿವಿಧ ಸಮಸ್ಯೆಗಳ ಶಮನಕ್ಕೆ ಇಂದು ಚಂಡಿಕಾ ಹೋಮ ಹವನ ನಡೆಸಲಾಯಿತು ಎಂದು ತಿಳಿದುಬಂದಿದೆ. ಶಿಕಾರಿಪುರದಲ್ಲಿಂದು ಸಿಎಂ BSYರ ಪ್ರವಾಸದ ಎರಡನೇ ದಿನವಾಗಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು. ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿ ಅಭಿವೃದ್ಧಿ ಮತ್ತು ನೀರಾವರಿ ಯೋಜನೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನೂರಾರು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣಗೌಡ ಮತ್ತು ಲೋಕಸಭಾ ಸದಸ್ಯ B.Y. ರಾಘವೇಂದ್ರ, ಶಾಸಕರಾದ ಕುಮಾರ ಬಂಗಾರಪ್ಪ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಉಪಸ್ಥಿತರಿದ್ದರು.