ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಘೋಷಣೆ ಮಾಡಲ್ಲ: ಜಾರಿಕೊಂಡ ಸಿಎಂ
ಕಲಬುರಗಿ: ಇಂದು ನೆರೆ ಮತ್ತು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಘೋಷಣೆ ಮಾಡಲ್ಲ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ. ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಂತರ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಹಲವೆಡೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆಯಾಗಿದೆ. ಸಮಸ್ಯೆ ನಿವಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮನೆ, ಬೆಳೆ ಹಾನಿಗೆ NDRF ನಿಯಮದ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಹೇಳಿದರು. […]
ಕಲಬುರಗಿ: ಇಂದು ನೆರೆ ಮತ್ತು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಘೋಷಣೆ ಮಾಡಲ್ಲ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ. ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಂತರ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಹಲವೆಡೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆಯಾಗಿದೆ. ಸಮಸ್ಯೆ ನಿವಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮನೆ, ಬೆಳೆ ಹಾನಿಗೆ NDRF ನಿಯಮದ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಹೇಳಿದರು.
4 ಜಿಲ್ಲೆಗಳಲ್ಲಿ, 14 ತಾಲೂಕುಗಳು ಸಂಕಷ್ಟಕ್ಕೆ ಗುರಿಯಾಗಿವೆ. 247 ಗ್ರಾಮಗಳಲ್ಲಿ ಸಮಸ್ಯೆಯಾಗಿದ್ದು 233 ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಜಂಟಿ ಸರ್ವೆ ನಂತರ ಹಾನಿಯ ನಿಖರ ಮಾಹಿತಿ ಸಿಗಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Published On - 3:22 pm, Wed, 21 October 20