
ಕಲಬುರಗಿ: ಇಂದು ನೆರೆ ಮತ್ತು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಘೋಷಣೆ ಮಾಡಲ್ಲ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.
4 ಜಿಲ್ಲೆಗಳಲ್ಲಿ, 14 ತಾಲೂಕುಗಳು ಸಂಕಷ್ಟಕ್ಕೆ ಗುರಿಯಾಗಿವೆ. 247 ಗ್ರಾಮಗಳಲ್ಲಿ ಸಮಸ್ಯೆಯಾಗಿದ್ದು 233 ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಜಂಟಿ ಸರ್ವೆ ನಂತರ ಹಾನಿಯ ನಿಖರ ಮಾಹಿತಿ ಸಿಗಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Published On - 3:22 pm, Wed, 21 October 20