ರಾಜ್ಯದಲ್ಲಿ ವರುಣಾಘಾತ, ಜಿಲ್ಲಾ ಕೇಂದ್ರಗಳಿಗೆ ತೆರಳುವಂತೆ ಸಚಿವರಿಗೆ ಸಿಎಂ BSY ಸೂಚನೆ

| Updated By: ಸಾಧು ಶ್ರೀನಾಥ್​

Updated on: Aug 06, 2020 | 4:28 PM

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಅಪಾರ ಹಾನಿಯಾಗುತ್ತಿದೆ. ಕೊರೊನಾದಿಂದಾಗಿ ಆಸ್ಪತ್ರೆಯಲ್ಲಿದ್ದರೂ ಇದನ್ನು ಗಮನಿಸಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ರಾಜ್ಯದ ಸಚಿವರುಗಳಿಗೆ ತಕ್ಷಣವೇ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ತೆರಳಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಕೊಡಗು, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಆದ್ರೆ ಕೆಲವೆಡೆ ಮಳೆಯಿಂದ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿದೆ. ಬೆಳಗಾವಿಯಲ್ಲಂತೂ ಪ್ರವಾಹವೇ ಬಂದಿದ್ದು, ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕೊಡಗಿನಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಗಳೇ ಮಾಯಾವಾಗುತ್ತಿವೆ. ಇದೆಲ್ಲವನ್ನೂ ಆಸ್ಪತ್ರೆಯಿಂದಲೇ […]

ರಾಜ್ಯದಲ್ಲಿ ವರುಣಾಘಾತ, ಜಿಲ್ಲಾ ಕೇಂದ್ರಗಳಿಗೆ ತೆರಳುವಂತೆ ಸಚಿವರಿಗೆ ಸಿಎಂ BSY ಸೂಚನೆ
Follow us on

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಅಪಾರ ಹಾನಿಯಾಗುತ್ತಿದೆ. ಕೊರೊನಾದಿಂದಾಗಿ ಆಸ್ಪತ್ರೆಯಲ್ಲಿದ್ದರೂ ಇದನ್ನು ಗಮನಿಸಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ರಾಜ್ಯದ ಸಚಿವರುಗಳಿಗೆ ತಕ್ಷಣವೇ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ತೆರಳಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಕೊಡಗು, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಆದ್ರೆ ಕೆಲವೆಡೆ ಮಳೆಯಿಂದ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿದೆ. ಬೆಳಗಾವಿಯಲ್ಲಂತೂ ಪ್ರವಾಹವೇ ಬಂದಿದ್ದು, ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕೊಡಗಿನಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಗಳೇ ಮಾಯಾವಾಗುತ್ತಿವೆ.

ಇದೆಲ್ಲವನ್ನೂ ಆಸ್ಪತ್ರೆಯಿಂದಲೇ ಗಮನಿಸಿರುವ ಮುಖ್ಯಮಂತ್ರಿ ಬಿಎಸ್‌ವೈ, ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ತಕ್ಷಣವೇ ತಮ್ಮ ಉಸ್ತುವಾರಿ ಜಿಲ್ಲೆಗಳು ಹಾಗೂ ಶಾಸಕರುಗಳಿಗೆ ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಮಾಡಬೇಕಾದ ಕಾರ್ಯಗಳ ಕುರಿತು ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ.