ಶಾಸಕ ಹರೀಶ್ ಪೂಂಜಾ ಪ್ರಕರಣ; ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?
ಹರೀಶ್ ಪೂಂಜಾ(Harish Poonja) ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಅವರು ಕಿಡಿಕಾರಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ ಎಂದರು.
ದಕ್ಷಿಣ ಕನ್ನಡ, ಮೇ.25: ಶಾಸಕ ಹರೀಶ್ ಪೂಂಜಾ(Harish Poonja) ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಅವರು ಕಿಡಿಕಾರಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ನ ಒತ್ತಡ ಅಂದರೆ ಎನು ಅರ್ಥ?, ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ಪ್ರಕರಣ ಅಲ್ಲ, ಈ ಕೇಸ್ನಲ್ಲಿ 7 ವರ್ಷ ಜೈಲು ವಾಸ ಇದೆ. ಆತ ಎಂಎಲ್ಎ ಎಂದು ಬಿಟ್ಟು ಬಿಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು(ಮೇ.25) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೂರ್ಣಕುಂಭ, ವಾದ್ಯಘೋಷಗಳ ಮೂಲಕ ಅದ್ಧೂರಿ ಸ್ವಾಗತ ಮಾಡಲಾಯಿತು. ಸರ್ಕಾರ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ದೇವಸ್ಥಾನದ ಬಳಿ ಸಿಎಂ ಬರುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ ಕೂಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ