ಶಾಸಕ ಹರೀಶ್ ಪೂಂಜಾ ಪ್ರಕರಣ; ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?

Edited By: ಕಿರಣ್ ಹನುಮಂತ್​ ಮಾದಾರ್

Updated on: May 25, 2024 | 3:14 PM

ಹರೀಶ್ ಪೂಂಜಾ(Harish Poonja)​ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಅವರು ಕಿಡಿಕಾರಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಶಾಸಕ ಹರೀಶ್​ ಪೂಂಜಾ ವಿರುದ್ಧ ಎರಡು ಎಫ್​ಐಆರ್​ ದಾಖಲಾಗಿದೆ ಎಂದರು.

ದಕ್ಷಿಣ ಕನ್ನಡ, ಮೇ.25: ಶಾಸಕ ಹರೀಶ್ ಪೂಂಜಾ(Harish Poonja)​ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಅವರು ಕಿಡಿಕಾರಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಶಾಸಕ ಹರೀಶ್​ ಪೂಂಜಾ ವಿರುದ್ಧ ಎರಡು ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್​ನ ಒತ್ತಡ ಅಂದರೆ ಎನು ಅರ್ಥ?, ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ಪ್ರಕರಣ ಅಲ್ಲ, ಈ ಕೇಸ್​ನಲ್ಲಿ 7 ವರ್ಷ ಜೈಲು ವಾಸ ಇದೆ. ಆತ ಎಂಎಲ್​ಎ ಎಂದು ಬಿಟ್ಟು ಬಿಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಂದು(ಮೇ.25) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೂರ್ಣಕುಂಭ, ವಾದ್ಯಘೋಷಗಳ ಮೂಲಕ ಅದ್ಧೂರಿ ಸ್ವಾಗತ ಮಾಡಲಾಯಿತು. ಸರ್ಕಾರ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ದೇವಸ್ಥಾನದ ಬಳಿ‌ ಸಿಎಂ ಬರುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ ಕೂಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More