High grounds police station: ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು
ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ SC ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿಯಿಂದ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ಅವರು ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಹೇಳಿಕೆಯ ವಿಚಾರ ಮತ್ತು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ […]
ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ SC ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿಯಿಂದ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ಅವರು ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಹೇಳಿಕೆಯ ವಿಚಾರ ಮತ್ತು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿಕೆ ನೀಡಿರುವ ವಿಚಾರಗಳ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬಿಜೆಪಿ ನಾಯಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಶಿವಮೊಗ್ಗ ನೆಹರು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಪ್ರೊಟೆಸ್ಟ್
ಶಿವಮೊಗ್ಗ: ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆದಿದೆ. ಶಿವಮೊಗ್ಗ ನಗರದಲ್ಲಿ ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ನಡೆದಿದ್ದು, ಕಾಮಗಾರಿಯಲ್ಲಿ ದೊಡ್ಡ ಮಟ್ಟದಲ್ಲಿ ಗೋಲ್ ಮಾಲ್ ನಡೆದಿದೆ. ಕಾಮಗಾರಿ ಹೆಸರಿನಲ್ಲಿ ಮನಸ್ಸಿಗೆ ಬಂದಂತೆ ನಗರ ತುಂಬೆಲ್ಲಾ ಗುಂಡಿ ತೋಡಲಾಗಿದೆ. ಕೋಟಿ ಕೋಟಿ ರೂ ದುಂದು ವೆಚ್ಚದ ಮೂಲಕ ಸಾರ್ವಜನಿಕರಿಗೆ ಕಾಮಗಾರಿ ಹೆಸರಿನಲ್ಲಿ ಟಾರ್ಚರ್ ನೀಡಲಾಗುತ್ತಿದೆ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಮುಂಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಹಾರದ ತನಿಖೆ ನಡೆಸಲು ಆಗ್ರಹಿಸಿದ್ದಾರೆ.
Published On - 12:05 pm, Tue, 30 November 21