AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸವದಿಯವ್ರೇ.. ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’

ಲಕ್ಷ್ಮಣ ಸವದಿಯವರೇ ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ರಾಜ್ಯ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.

‘ಸವದಿಯವ್ರೇ.. ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’
ಸಾರಿಗೆ ಸಚಿವ ಲಕ್ಷ್ಮಣ ಸವದಿ
KUSHAL V
|

Updated on:Dec 13, 2020 | 11:40 AM

Share

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಕಾಸ ಸೌಧದಲ್ಲಿ ಇಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಎಐಟಿಯುಸಿ, ಬಿಎಂಎಸ್, ಸಿಐಟಿಯು ಮತ್ತು ಮಹಾಮಂಡಳ ಸಂಘಟನೆಗಳ ಜೊತೆ ಸವದಿ ಸಭೆ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ಬಿಎಂಟಿಸಿ ಎಂಡಿ ಶಿಖಾ, ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಹಾಗೂ NWKRTC, NEKRTC ಎಂಡಿಗಳು ಭಾಗಿಯಾಗಿದ್ದಾರೆ. ಜೊತೆಗೆ, ಸಭೆಯಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಸಹ ಉಪಸ್ಥಿತರಿದ್ದಾರೆ.

ಇದಲ್ಲದೆ, ಸಾರಿಗೆ‌ ನೌಕರರ ಮುಖಂಡರಾದ ಅನಂತ ಸುಬ್ಬುರಾವ್ ಸೇರಿದಂತೆ ಒಕ್ಕೂಟದ ಮುಖಂಡರು ಭಾಗಿಯಾಗಿದ್ದು AITUCಯಿಂದ ಅನಂತ ಸುಬ್ಬುರಾವ್, ವಿಜಯ್ ಭಾಸ್ಕರ್, CITUಯಿಂದ ಪ್ರಕಾಶ್ ,ರೇವಪ್ಪ ಮತ್ತು ಭಾರತೀಯ ಮಜ್ದೂರ್ ಸಂಘದ ಪೂಂಜಾ ಮಂಜುನಾಥ, ಉದಯ್ ಕುಮಾರ್ ಮತ್ತು ಮಹಾಮಂಡಳದ ಅರುಸು ಸೇರಿದಂತೆ ನೋಂದಾಯಿತ ಒಕ್ಕೂಟದ ಮುಖಂಡರು ಮಾತ್ರ ಭಾಗಿಯಾಗಿದ್ದಾರೆ.

ಆದರೆ ಸಭೆಯಲ್ಲಿ ಪ್ರತಿಭಟನಾ ನಿರತ ಮುಖಂಡರೇ ಆಗಮಿಸಿಲ್ಲ ಎಂದು ತಿಳಿದುಬಂದಿದೆ. ಕೋಡಿಹಳ್ಳಿ ಚಂದ್ರಶೇಖರ್​ ನೇತೃತ್ವದ ತಂಡ ಸಭೆಯಲ್ಲಿ ಇಲ್ಲ ಎಂದು ಹೇಳಲಾಗಿದೆ. ಈ ಬಾರಿಯೂ ಅವರನ್ನು ಆಹ್ವಾನ ಮಾಡದೆ ಸಭೆ ನಡೆಸ್ತಿರುವ ಸವದಿ ಬರೀ ನೋಂದಾಯಿತ ಮುಖಂಡರ ಜೊತೆಗೆ ಮಾತ್ರ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

‘ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’ ಈ ನಡುವೆ, ಲಕ್ಷ್ಮಣ ಸವದಿಯವರೇ ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ರಾಜ್ಯ ಕಾಂಗ್ರೆಸ್ ಟಾಂಗ್ ಕೊಟ್ಟಿದೆ. ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಉಚಿತ ಬಸ್ ಸೇವೆ..

Published On - 11:16 am, Sun, 13 December 20

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ