ಜನಧ್ವನಿ ಯಾತ್ರೆಗೆ ಚಾಲನೆ; ದೇವನಹಳ್ಳಿಯಲ್ಲಿ ಸಕಲ ಸಿದ್ಧತೆ

| Updated By: ಸಾಧು ಶ್ರೀನಾಥ್​

Updated on: Mar 03, 2021 | 1:17 PM

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧದ 100 ಕ್ಷೇತ್ರಗಳ ಕಾಂಗ್ರೆಸ್‌ ಪಕ್ಷದ ಜನಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿದೆ.

ಜನಧ್ವನಿ ಯಾತ್ರೆಗೆ ಚಾಲನೆ; ದೇವನಹಳ್ಳಿಯಲ್ಲಿ ಸಕಲ ಸಿದ್ಧತೆ
ಜನಧ್ವನಿ
Follow us on

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧದ 100 ಕ್ಷೇತ್ರಗಳ ಕಾಂಗ್ರೆಸ್‌ ಪಕ್ಷದ ಜನಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ.ಪರಮೇಶ್ವರ್, ರಾಮಲಿಂಗಾರೆಡ್ಡಿಯಿಂದ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಜನಧ್ವನಿ ಯಾತ್ರೆಗೆ ಚಾಲನೆ ಸಿಕ್ಕಿದೆ. ಜನಧ್ವನಿ ಯಾತ್ರೆ ಬಸ್‌ಗೆ, ನೇಗಿಲಿಗೆ ನಾಯಕರು ಪೂಜೆ ಸಲ್ಲಿಸಿದ್ದಾರೆ.

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರ ನಡುವೆ ಹುಟ್ಟಿದ್ದ ಮುನಿಸನ್ನು ದೂರು ಮಾಡಿ ಸಿದ್ದರಾಮಯ್ಯ ಜನಧ್ವನಿ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ಹಿಂದೆ ಈ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು. ಆದ್ರೆ ಡಿಕೆಶಿ ನಿನ್ನೆ ಭೇಟಿ ಮಾಡಿ ಸಮಾಧಾನಪಡಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ. ಮೊದಲ‌ ಹಂತದಲ್ಲಿ 100 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಮೊದಲಿಗೆ ಜನಧ್ವನಿ ಯಾತ್ರೆಗೆ ಚಾಲನೆ ಬಳಿಕ ದೇವನಹಳ್ಳಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಮಧ್ಯಾಹ್ನ 3ಕ್ಕೆ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇನ್ನು ಇಂದಿನಿಂದ ಕಾಂಗ್ರೆಸ್ ಜನಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ದೇವನಹಳ್ಳಿಯಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಡೊಳ್ಳು ಕುಣಿತ ವೀರಗಾಸೆಯೊಂದಿಗೆ ಯಾತ್ರೆಗೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವನಹಳ್ಳಿ ಹೊರವಲಯದ ದೊಡ್ಡಬಳ್ಳಾಪುರ ಕ್ರಾಸ್​ನಿಂದ ಯಾತ್ರೆ ಆರಂಭವಾಗಲಿದೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಛೇರಿ ತಲುಪಲಿದ್ದಾರೆ. ಯಾತ್ರೆಯಲ್ಲಿ ಪಾಲ್ಗೊಳ್ಳಲು ದೇವನಹಳ್ಳಿ ದೊಡ್ಡಬಳ್ಳಾಪುರ ನೆಲಮಂಗಲ ಮತ್ತು ಹೊಸಕೋಟೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ.

ಇದನ್ನೂ ಓದಿ: ನಾನು ಕನಕಪುರ ಬಂಡೆ ಅಲ್ಲ.. ಅದು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ -ಡಿಕೆಶಿ ಜಬರ್​ದಸ್ತ್​ ಡೈಲಾಗ್!​