ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 24 ವರ್ಷದ ಫರಾನ್ ಎಂಬ ಯುವಕನಿಂದ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿದ್ದು, ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಶಾಸಕರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ತನ್ವೀರ್ ಸೇಠ್​ಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶಾಸಕರ ಮೇಲೆ ಹಲ್ಲೆ ನಡೆಸಿದ ಫರಾನ್​ನನ್ನು ಪೊಲೀಸರು […]

ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on:Nov 18, 2019 | 12:50 PM

ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

24 ವರ್ಷದ ಫರಾನ್ ಎಂಬ ಯುವಕನಿಂದ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿದ್ದು, ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಶಾಸಕರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ತನ್ವೀರ್ ಸೇಠ್​ಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಶಾಸಕರ ಮೇಲೆ ಹಲ್ಲೆ ನಡೆಸಿದ ಫರಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳಕ್ಕೆ ನಗರ‌ ಪೊಲೀಸ್ ಆಯುಕ್ತರಾದ ಕೆ.ಟಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯು.ಟಿ.ಖಾದರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಬಲಿಗನಿಂದಲೆ ತನ್ವೀರ್ ಸೇಠ್ ಗೆ ಹಲ್ಲೆ: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಯುವಕ ಶಾಸಕರ ಬೆಂಬಲಿಗ ಎಂದು ಹೇಳಲಾಗುತ್ತಿದೆ. ತನ್ವೀರ್ ಸೇಠ್ ಜೊತೆ ಬ್ಯಾನರ್ ನಲ್ಲಿ ಇರುವ ಪೋಟೋ ವೈರಲ್ ಆಗಿದೆ.

2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ: ಶಾಸಕ ತನ್ವೀರ್ ಸೇಠ್​ಗೆ ರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

Published On - 6:31 am, Mon, 18 November 19

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ