ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 24 ವರ್ಷದ ಫರಾನ್ ಎಂಬ ಯುವಕನಿಂದ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿದ್ದು, ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಶಾಸಕರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ತನ್ವೀರ್ ಸೇಠ್​ಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶಾಸಕರ ಮೇಲೆ ಹಲ್ಲೆ ನಡೆಸಿದ ಫರಾನ್​ನನ್ನು ಪೊಲೀಸರು […]

ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ
ಸಾಧು ಶ್ರೀನಾಥ್​

Updated on: Nov 18, 2019 | 12:50 PM

ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

24 ವರ್ಷದ ಫರಾನ್ ಎಂಬ ಯುವಕನಿಂದ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿದ್ದು, ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಶಾಸಕರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ತನ್ವೀರ್ ಸೇಠ್​ಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಶಾಸಕರ ಮೇಲೆ ಹಲ್ಲೆ ನಡೆಸಿದ ಫರಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳಕ್ಕೆ ನಗರ‌ ಪೊಲೀಸ್ ಆಯುಕ್ತರಾದ ಕೆ.ಟಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯು.ಟಿ.ಖಾದರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಬಲಿಗನಿಂದಲೆ ತನ್ವೀರ್ ಸೇಠ್ ಗೆ ಹಲ್ಲೆ:
ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಯುವಕ ಶಾಸಕರ ಬೆಂಬಲಿಗ ಎಂದು ಹೇಳಲಾಗುತ್ತಿದೆ. ತನ್ವೀರ್ ಸೇಠ್ ಜೊತೆ ಬ್ಯಾನರ್ ನಲ್ಲಿ ಇರುವ ಪೋಟೋ ವೈರಲ್ ಆಗಿದೆ.

2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ:
ಶಾಸಕ ತನ್ವೀರ್ ಸೇಠ್​ಗೆ ರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

Published On - 6:31 am, Mon, 18 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us