ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಪಟ್ಟ, ಕಲಬುರಗಿಯ ಸುಲೆಪೇಟ್ ನಲ್ಲಿ ಸಂಭ್ರಮಾಚರಣೆ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 26, 2022 | 3:29 PM

ಸುಲೆಪೇಟ್ ನಲ್ಲಿ ಕಾರ್ಯಕರ್ತರು ಮೆರವಣಿಗೆ ತೆಗೆದು, ಡಾ ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸುತ್ತಾ ಸಂಭ್ರಮಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಕಲಬುರಗಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿರೋದು ಸುಳ್ಳಲ್ಲ. ಕಲಬುರಗಿಯ ನಾನಾ ಜಿಲ್ಲೆಗಳಲ್ಲಿ ಖರ್ಗೆ ಅವರು ಆಧಿಕಾರ ವಹಿಸಿಕೊಂಡ ನಂತರ ಸಂಭ್ರಮಾಚರಣೆಗಳು ನಡೆಯುತ್ತಿವೆ. ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೆಪೇಟ್ ನಲ್ಲಿ (Sulepet) ಕಾರ್ಯಕರ್ತರು ಮೆರವಣಿಗೆ ತೆಗೆದು, ಡಾ ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸುತ್ತಾ ಸಂಭ್ರಮಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.