ದಶಕದ ಬೇಡಿಕೆ ಈಡೇರಿಕೆ‌, BIAL ಬಳಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಅಸ್ತು ಅಂದ್ರು! ಯಾರು?

ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ವಿಚಾರವನ್ನು ಕೇಂದ್ರ ರೈಲ್ವೆ ಸಚಿವ ಪಿಯುಸಿ ಗೊಯಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದರಿಂದಾಗಿ ಬೆಂಗಳೂರಿನ ಜನರ ದಶಕಗಳ ಹಳೆಯ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಮುಖಾಂತರವೇ ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿದ್ದು, ಈ ತಿಂಗಳಲ್ಲಿ ವಿಮಾನ ನಿಲ್ದಾಣದ ಬಳಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿಯನ್ನು ಆರಂಭ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣದಿಂದ […]

ದಶಕದ ಬೇಡಿಕೆ ಈಡೇರಿಕೆ‌, BIAL ಬಳಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಅಸ್ತು ಅಂದ್ರು! ಯಾರು?

Updated on: Aug 17, 2020 | 3:19 PM

ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ವಿಚಾರವನ್ನು ಕೇಂದ್ರ ರೈಲ್ವೆ ಸಚಿವ ಪಿಯುಸಿ ಗೊಯಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದರಿಂದಾಗಿ ಬೆಂಗಳೂರಿನ ಜನರ ದಶಕಗಳ ಹಳೆಯ ಬೇಡಿಕೆ ಈಡೇರಿದಂತಾಗಿದೆ.

ರೈಲ್ವೆ ಮುಖಾಂತರವೇ ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿದ್ದು, ಈ ತಿಂಗಳಲ್ಲಿ ವಿಮಾನ ನಿಲ್ದಾಣದ ಬಳಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿಯನ್ನು ಆರಂಭ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣದಿಂದ ಎರಡು ಕಿಮೀ ದೂರದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವಾಗಲಿದ್ದು, ರೈಲ್ವೆ ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ.

ಇದರಿಂದಾಗಿ ಸಾವಿರಾರು ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ವಿಮಾನ ಪ್ರಯಾಣ ಬೆಳೆಸುವ ಜನರು ಟ್ರಾಫಿಕ್ ಜಾಮ್ ಕಿರಿಕಿರಿ ಇಲ್ಲದೆ, ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ರೈಲಿನಲ್ಲಿ ಪ್ರಯಾಣ ಬೆಳೆಸಲು ಅನುಕೂಲ ಮಾಡಿಕೊಡಲಾಗಿದೆ.

 

Published On - 3:13 pm, Mon, 17 August 20