ದಕ್ಷಿಣ ಕನ್ನಡ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಹತ್ಯೆಗೈದಿದ್ದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಕೇರಳದ ಕಾಸರಗೋಡು ನಿವಾಸಿಯಾದ ಆರೋಪಿ ಅಶ್ರಫ್(30) ಬಂಧನವಾಗಿದೆ.
ಸೆಪ್ಟಂಬರ್ 25ರಂದು ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಕಳ್ಳತನಕ್ಕಾಗಿ ಬಂದಿದ್ದ ಆರೋಪಿ ಒಂಟಿಯಾಗಿ ವಾಸವಿದ್ದ ಕುಸುಮಾ(53) ಮೇಲೆ ಅತ್ಯಾಚಾರವೆಸಗಿ, ನಂತರ ಬೆಂಕಿ ಹಚ್ಚಿ ಕೊಲೆಗೈದಿದ್ದ.
ಕುಸುಮಾರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿಯಲು ಯತ್ನಿಸಿ ವಿಫಲನಾಗಿದ್ದ ಅಶ್ರಫ್ ಅದೇ ಸಿಟ್ಟಿನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಬಳಿಕ ಚಿನ್ನ ಮತ್ತು ನಗದು ದೋಚಿ ಪರಾರಿಯಾಗಿದ್ದ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಇದೀಗ ಆರೋಪಿಯನ್ನು ಬಂಧಿಸಲಾಗಿದೆ.