ಬೆಂಗಳೂರು ಗ್ರಾಮಾಂತರ: ರೆಸಾರ್ಟ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೀಮಕನಹಳ್ಳಿ ಬಳಿಯ ಸೊಲೇಸ್ ರೆಸಾರ್ಟ್ನಲ್ಲಿ ಬೆಳಕಿಗೆ ಬಂದಿದೆ.
ಇಬ್ಬರು ಆರೋಪಿಗಳನ್ನ ಬಂಧಿಸಿ ರೆಸಾರ್ಟ್ ಸೀಜ್ ಮಾಡಿರೋ ಪೊಲೀಸರು ಐವರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಇನ್ನು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.