AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . […]

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ
ಸಾಧು ಶ್ರೀನಾಥ್​
| Edited By: |

Updated on: Aug 30, 2020 | 5:55 PM

Share

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ.

ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . ಈ ವೇಳೆ ಕಾರಿನ ಡೋರ್ ತೆಗೆದು ನೋಡಿದ ಪೊಲೀಸರಿಗೆ ಶಾಕ್ ಆಗಿದೆ. ಕಾರಿನ ಇಕ್ಕಟ್ಟಾದ ಜಾಗದಲ್ಲಿ ಮೂರು ಜಾನುವಾರುಗಳ ಕಾಲುಗಳನ್ನು ಕಟ್ಟಿ ಕಿರಾತಕರು ತುಂಬಿದ್ದರು. ಕೂಡಲೆ ಪೊಲೀಸರು ಜಾನುವಾರಗಳನ್ನು ಕಾರಿನಿಂದ ಕೆಳಗಿಳಿಸಿ ರಕ್ಷಣೆ ಮಾಡಿದ್ದಾರೆ.

ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಜಾನುವಾರುಗಳ ಅಕ್ರಮ ಸಾಗಾಟಕ್ಕೆ ಬಳಸಿದ ಕಾರು ಉಮ್ಮರ್ ಮೊಯಿದ್ದೀನ್ ಎಂಬಾತನಿಗೆ ಸೇರಿದ್ದು ಎಂಬ ಮಾಹಿತಿ ನೀಡಿದ್ದಾರೆ.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು