AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಂಠಿ, ಮೆಕ್ಕೆಜೋಳ ಮಧ್ಯೆ ಇವರು ಏನು​ ಬೆಳೆದಿದ್ದರು ಗೊತ್ತಾ?!

ಶಿವಮೊಗ್ಗ: ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ DC ಕ್ಯಾಪ್ಟನ್ ಅಜಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಹೊಲದಲ್ಲಿ ಬೆಳೆದಿದ್ದ 200ಕ್ಕೂ ಅಧಿಕ ಗಾಂಜಾ ಗಿಡಗಳನ್ನ ಜಪ್ತಿ ಮಾಡಲಾಯಿತು. ವಶಕ್ಕೆ ಪಡೆದ ಗಿಡಗಳ ಮೌಲ್ಯ ಸುಮಾರು 5.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಪರಶುರಾಮ್, ಗಂಗಾಧರಪ್ಪ ಮತ್ತು ಹುಚ್ಚರಾಯಪ್ಪ ಎಂಬವರಿಗೆ ಸೇರಿದ್ದ ಹೊಲದಲ್ಲಿ ಶುಂಠಿ ಹಾಗೂ ಮೆಕ್ಕೆಜೋಳ ನಡುವೆ ಗಾಂಜಾ ಗಿಡಗಳನ್ನು ಬೆಳೆಸಲಾಗಿತ್ತು! […]

ಶುಂಠಿ, ಮೆಕ್ಕೆಜೋಳ ಮಧ್ಯೆ ಇವರು ಏನು​ ಬೆಳೆದಿದ್ದರು ಗೊತ್ತಾ?!
KUSHAL V
| Updated By: ಸಾಧು ಶ್ರೀನಾಥ್​|

Updated on:Sep 22, 2020 | 9:16 PM

Share

ಶಿವಮೊಗ್ಗ: ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ DC ಕ್ಯಾಪ್ಟನ್ ಅಜಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಹೊಲದಲ್ಲಿ ಬೆಳೆದಿದ್ದ 200ಕ್ಕೂ ಅಧಿಕ ಗಾಂಜಾ ಗಿಡಗಳನ್ನ ಜಪ್ತಿ ಮಾಡಲಾಯಿತು. ವಶಕ್ಕೆ ಪಡೆದ ಗಿಡಗಳ ಮೌಲ್ಯ ಸುಮಾರು 5.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಪರಶುರಾಮ್, ಗಂಗಾಧರಪ್ಪ ಮತ್ತು ಹುಚ್ಚರಾಯಪ್ಪ ಎಂಬವರಿಗೆ ಸೇರಿದ್ದ ಹೊಲದಲ್ಲಿ ಶುಂಠಿ ಹಾಗೂ ಮೆಕ್ಕೆಜೋಳ ನಡುವೆ ಗಾಂಜಾ ಗಿಡಗಳನ್ನು ಬೆಳೆಸಲಾಗಿತ್ತು!

ತೀರ್ಥಹಳ್ಳಿ ಬಳಿ ಗಾಂಜಾ ಸ್ಮಗ್ಲರ್ಸ್​ ಅರೆಸ್ಟ್​ ಇತ್ತ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮಹಿಳೆ ಸೇರಿ ನಾಲ್ವರ ಗಾಂಜಾ ಸ್ಮಗ್ಲರ್ಸ್​ಗಳನ್ನ ಬಂಧಿಸಿದ್ದಾರೆ. ಎರಡು ಕೆ.ಜಿಗೂ ಅಧಿಕ ಗಾಂಜಾ ಮತ್ತು ಒಂದು ಕಾರ್ ಸೀಜ್ ಮಾಡಲಾಗಿದೆ.

ಪಟ್ಟಣದ ಬಾಳೇಬೈಲು ಬಳಿ ಕಾರ್ಯಾಚರಣೆ ನಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಬರುತ್ತಿದ್ದ ಕಾರ್​ನ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದೆ. ಬಂಧಿತ ಆರೋಪಿಗಳನ್ನು ಮುಬಾರಕ್, ಜೀಶನ್, ಜೀನಾಥ್ ಹಾಗೂ ಜಾಬೀರ್ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಂಧಿತರು ಸಾಗರ ಹಾಗೂ ಉಡುಪಿಯ ಕಾರ್ಕಳದವರು ಎಂದು ತಿಳಿದುಬಂದಿದೆ.

Published On - 3:45 pm, Tue, 22 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ