ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 529 ಜನರಿಗೆ ಕೊರೊನಾ ದೃಢವಾಗಿದೆ.
ಬೆಂಗಳೂರು: ದೇಶದಲ್ಲಿ ಜನವರಿ 16ರಿಂದ ಕೊರೊನಾ ಲಸಿಕೆ ಹಂಚಿಕೆ ಆರಂಭವಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 529 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,36,955 ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ ಮಿತಿ ಮೀರಿ ಕಡಿಮೆ ಆಗಿದೆ.
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,204 ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 9,18,099 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 6,633 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವ ಮೂಡಿಸಿದೆ.