ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ: ಸಚಿವ ಡಾ. ಸುಧಾಕರ್

Karnataka Covid-19 Cases News Live Updates: ಕರ್ನಾಟಕದಲ್ಲಿ ಲಾಕ್​ಡೌನ್​ನಂತಹ ಕಟು ನಿರ್ಧಾರಕ್ಕೆ ಸರ್ಕಾರ ಮುಂದಾಗುವ ಸಾಧ್ಯತೆ ಕಡಿಮೆ ಇದೆಯಾದರೂ ಕೆಲ ಕಠಿಣ ನಿಯಮಗಳನ್ನು ಜನರ ಮುಂದಿಡಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.

 • TV9 Web Team
 • Published On - 18:03 PM, 17 Apr 2021
ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ: ಸಚಿವ ಡಾ. ಸುಧಾಕರ್
ಡಾ.ಕೆ.ಸುಧಾಕರ್​

ಕೊರೊನಾ ಎರಡನೇ ಅಲೆ ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.

 

LIVE NEWS & UPDATES

The liveblog has ended.
 • 17 Apr 2021 18:03 PM (IST)

  ರಾಜ್ಯಪಾಲರನ್ನು ಭೇಟಿಯಾದ ಆರೋಗ್ಯ ಸಚಿವ ಸುಧಾಕರ್

  ಬೆಂಗಳೂರು: ರಾಜ್ಯಪಾಲ ವಜೂಭಾಯ್‌ ವಾಲಾರನ್ನು ಆರೋಗ್ಯ ಸಚಿವ ಕೆ.ಸುಧಾಕರ್‌ ಶನಿವಾರ ಸಂಜೆ ಭೇಟಿಯಾಗಿ, ಕೊರೊನಾ ನಿಯಂತ್ರಣ ಸಂಬಂಧ ವರದಿ ನೀಡಿದರು.

 • 21 Mar 2021 17:02 PM (IST)

  ಛತ್ತೀಸ್​ಗಢದಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ

  ವಿಶ್ವದಾದ್ಯಂತ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಈ ಕೊರೊನಾ ಮಹಾಮಾರಿಗೆ ಛತ್ತೀಸ್​ಗಢ ಕೂಡ ತತ್ತರಿಸಿ ಹೋಗಿದೆ. ಛತ್ತೀಸ್​ಗಢದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳವಾದ ಹಿನ್ನೆಲೆಯಲ್ಲಿ ಛತ್ತೀಸ್​ಗಢದಲ್ಲಿನ ಅಂಗನವಾಡಿ, ಶಾಲಾ-ಕಾಲೇಜಿಗೆ ಸರ್ಕಾರ ರಜೆ ಘೋಷಿಸಿದೆ.

 • 21 Mar 2021 15:15 PM (IST)

  ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಕೊರೊನಾ ಪಾಸಿಟಿವ್

  ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಕೊರೊನಾ ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಓಂ ಬಿರ್ಲಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾದ ಎರಡನೇ ಅಲೆ ಈಗಾಗಲೇ ಶುರುವಾಗಿದ್ದು, ಮತ್ತೆ ಪುನಃ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಮತ್ತೆ ಲಾಕ್​ಡೌನ್ ಆಗುವ ಸಾಧ್ಯತೆಗಳ ಬಗ್ಗೆ ಗೊಂದಲದಲ್ಲಿದ್ದಾರೆ.

 • 21 Mar 2021 13:02 PM (IST)

  ಕೊರೊನಾ ನಿಯಂತ್ರಣಕ್ಕೆ ತಜ್ಞರಿಂದ ಸರ್ಕಾರಕ್ಕೆ ಸಲಹೆ

  ಕೊರೊನಾ ಬೆಂಗಳೂರಿನಲ್ಲಿ ಸಾವಿರ ದಾಟಿದೆ. ರಾಜ್ಯದಲ್ಲಿ ಮಾರ್ಚ್ 20ರಂದು ಏಳು ಸಾವಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ತಜ್ಞರು ಸರ್ಕಾರಕ್ಕೆ ಕಠಿಣ ಸಲಹೆಗಳನ್ನು ನೀಡಿದ್ದಾರೆ. ಆ ಪ್ರಕಾರ ರಾಜ್ಯದಲ್ಲಿ 3 ವಾರಗಳ ಕಾಲ ಕಠಿಣ ರೂಲ್ಸ್ ಪಾಲಿಸಬೇಕು. SSLC, ದ್ವಿತೀಯ ಪಿಯು, ಅಂತಿಮ ಪದವಿ ಕಾಲೇಜು ಇವನ್ನು ಹೊರತುಪಡಿಸಿ ಎಲ್ಲ ಶಾಲಾ-ಕಾಲೇಜು ಬಂದ್ ಮಾಡಬೇಕು. ಪಾರ್ಟಿ ಹಾಲ್, ಗ್ರಂಥಾಲಯಗಳು, ಜಿಮ್ ಸೆಂಟರ್ಸ್, ಒಳಾಂಗಣ ಕ್ರೀಡಾ ಚಟುವಟಿಕೆ, ಸ್ವಿಮ್ಮಿಂಗ್ ಪೂಲ್ಸ್ ಕಡ್ಡಾಯವಾಗಿ ಮುಚ್ಚಬೇಕು ಎಂದು ತಜ್ಞರು ಸೂಚಿಸಿದ್ದಾರೆ.

 • 21 Mar 2021 13:01 PM (IST)

  ರಾಜ್ಯದ ಜನರು ಕೊವಿಡ್ ನಿಯಮ ಪಾಲಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ: ಡಾ.ಕೆ.ಸುಧಾಕರ್

  ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯದ ಜನರ ನಡವಳಿಕೆ ಸಹ ಬದಲಾಗಬೇಕು ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಸೋಂಕಿಗೆ ಸರ್ಕಾರ ಲಸಿಕೆಯನ್ನು ಕೊಡಬಹುದು. ಆದರೆ ಸೋಂಕು ಹೆಚ್ಚಾದರೆ ಸರ್ಕಾರದಿಂದ ನಿಯಂತ್ರಣ ಸಾಧ್ಯವಿಲ್ಲ. ರಾಜ್ಯದ ಜನರು ಕೊವಿಡ್ ನಿಯಮ ಪಾಲಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ನೀವು ಸುರಕ್ಷಿತರಾಗಿದ್ದರೆ ನಿಮ್ಮನ್ನ ನಂಬಿದವರು ಸುರಕ್ಷಿತ. ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸುವ ಕೆಲಸ ಮಾಡಿ. ಪಾರ್ಟಿ, ಜಾತ್ರೆ ಎಂದು ಕೊರೊನಾ ರಿಯಾಯಿತಿ ನೀಡಲ್ಲ. ಯುವಕರು ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಕೊರೊನಾ 2ನೇ ಅಲೆ ನಿಯಂತ್ರಣ ಮಾಡಬೇಕಾಗಿದೆ. ತಜ್ಞರ ಸಲಹೆ ಪಾಲಿಸದಿದ್ದರೆ ಮುಂದೆ ಕಷ್ಟವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

 • 21 Mar 2021 12:55 PM (IST)

  ನಿನ್ನೆ ಒಂದೇ ದಿನಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ಐದು ಜನರಿಗೆ ಕೊರೊನಾ ಸೋಂಕು ದೃಢ

  ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಒಂದು‌ ವಾರದಲ್ಲಿ 11 ಕೊರೊನಾ ಕೇಸ್ ಪತ್ತೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಯಾವುದೇ ಕೇಸ್ ಪತ್ತೆಯಾಗಿರಲಿಲ್ಲ. ಆದರೆ ನಿನ್ನೆ ಒಂದೇ ದಿನಕ್ಕೆ ಜಿಲ್ಲೆಯಲ್ಲಿ ಐದು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಈ ಬಗ್ಗೆ ಕೊಪ್ಪಳದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದು, ನಿನ್ನೆ ಪಾಸಿಟವ್ ಬಂದ ಐದು ಜನರನ್ನು ಹೋಮ್ ಐಸೋಲೇಶನ್ ಅಲ್ಲಿ ನೋಡಿಕೊಳ್ಳಲಾಗುತ್ತಿದೆ. ಇಷ್ಟೇ ಅಲ್ಲದೇ ಜಿಲ್ಲೆಯಲ್ಲಿ ಇದೀಗ ಕೋವಿಡ್ ಟೆಸ್ಟ್ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

 • 21 Mar 2021 12:11 PM (IST)

  ಇಬ್ಬರು ಭಾರತೀಯ ಶೂಟರ್ಸ್‌ಗೆ ಕೊರೊನಾ ಸೋಂಕು

  ಐಎಸ್​ಎಸ್​ಎಫ್​ ವರ್ಲ್ಡ್‌ ಕಪ್‌ನಲ್ಲಿ ಭಾಗಿಯಾಗಿದ್ದ ಇಬ್ಬರು ಭಾರತೀಯ ಶೂಟರ್ಸ್​ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂಟರ್‌ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್ ಫೆಡರೇಷನ್ ಭಾಗಿಯಾಗಿದ್ದ ಇಬ್ಬರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿತ ಶೂಟರ್ಸ್‌ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 • 21 Mar 2021 11:18 AM (IST)

  ಚಾಮರಾಜನಗರ ಜಿಲ್ಲೆ, ಕೇರಳದ ಗಡಿ ಭಾಗದಲ್ಲಿ ಕೊವಿಡ್ ಟೆಸ್ಟ್​ ನಿರ್ಲಕ್ಷ್ಯ

  ರಾಷ್ಟ್ರದಾದ್ಯಂತ ಕೊರೊನಾದ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಅಂತರ್ ರಾಜ್ಯ ಚೆಕ್ ಪೋಸ್ಟ್​ಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸರ್ಕಾರ ತಾಕೀತು ಮಾಡಿದೆ. ಆದರೆ ಮೈಸೂರು, ಗುಂಡ್ಲುಪೇಟೆ ಮಾರ್ಗವಾಗಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಬರುವ ಮೂಲೆಹೊಳೆ ಚೆಕ್ ಪೋಸ್ಟ್​ನಲ್ಲಿ ಕೊವಿಡ್ ಪರೀಕ್ಷೆ ಇಲ್ಲ. ಇನ್ನು ಈ ಚೆಕ್​ ಪೋಸ್ಟ್​ನಲ್ಲಿ ಕಂದಾಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲ. ರಾತ್ರಿ 9ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಈ ಮೂಲೆಹೊಳೆ ಹೆದ್ದಾರಿ ಬಂದ್ ಆಗಿರುತ್ತದೆ. ಬೆಳಗ್ಗೆ 6 ಗಂಟೆಗೆ ಓಪನ್ ಆದ್ರೂ ಚೆಕ್ಕಿಂಗ್​ಗೆ ಯಾವುದೇ ಅಧಿಕಾರಿ ಬರುವುದಿಲ್ಲ. ಒಟ್ಟಾರೆ ಕೊರೊನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಈ ರೀತಿಯ ನಿರ್ಲಕ್ಷ್ಯ ಜನರಲ್ಲಿ ಆತಂಕ ಹೆಚ್ಚಿಸಿದೆ.

 • 21 Mar 2021 10:37 AM (IST)

  ಯಾವ ದೇಶದಲ್ಲಿ ಯಾರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ?

  ವಿಶ್ವದ ವಿವಿಧ ದೇಶಗಳಲ್ಲಿ ಕೊರೊನಾ ಲಸಿಕೆ ಪಡೆಯುವ ನೀತಿಗಳು ವಿಭಿನ್ನವಾಗಿವೆ ಮತ್ತು ವೈರುಧ್ಯಮಯವಾಗಿವೆ. ಇಸ್ರೇಲ್​ನಲ್ಲಿ ಯುವಕರಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಈ ಲಸಿಕಾ ನಿಯಮ ಸ್ವಲ್ಪ ಭಿನ್ನವಾಗಿದ್ದು, ಹಿರಿಯರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಅಮೆರಿಕಾ ಸಂಯುಕ್ತ ಸಂಸ್ಥಾನದ ಇಲಿನಾಯ್ಸ್ ರಾಜ್ಯದಲ್ಲಿ ಧೂಮಪಾನಿಗಳಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಇನ್ನು ನ್ಯೂಯಾರ್ಕ್​ನಲ್ಲಿ ಗರ್ಭಿಣಿ ಮಹಿಳೆಯರಿಗೆ ಕೊವಿಡ್ ಲಸಿಕೆ ನೀಡಲಾಗುತ್ತಿದೆ.

 • 21 Mar 2021 10:14 AM (IST)

  ಹಾಸನ ಜಿಲ್ಲೆಯಲ್ಲಿ ಮತ್ತೆ ಹೆಚ್ಚುತ್ತಿರುವ ಕೊವಿಡ್ ಸೋಂಕು

  ಹಾಸನ ಜಿಲ್ಲೆಯಲ್ಲಿ ಮಾರ್ಚ್ 20ರಂದು 25 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಕಳೆದ 4 ದಿನಗಳಲ್ಲಿ 78 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 28,978 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ 28,352 ಜನರು ಸೋಂಕಿನಿಂದ ಗುಣಮುಖರಾಗಿದ್ದು, 158 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ. ಸದ್ಯ ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ 468 ಜನ ಬಲಿಯಾಗಿದ್ದಾರೆ. ಒಟ್ಟಾರೆಯಾಗಿ ಹಾಸನ ಜಿಲ್ಲೆಯಲ್ಲಿ ತಿಂಗಳುಗಳ ಬಳಿಕ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.

 • 21 Mar 2021 09:56 AM (IST)

  ಗದಗ ಜಿಲ್ಲೆಯಲ್ಲಿ ನಿನ್ನೆ ಐವರಿಗೆ ಕೊರೊನಾ ಸೋಂಕು ದೃಢ

  ಗದಗ ಜಿಲ್ಲೆಯಲ್ಲೂ ಕೊರೊನಾ 2ನೇ ಅಲೆಯ ಆತಂಕ ಶುರುವಾಗಿದ್ದು, 4-5 ದಿನದಿಂದ ಕೊವಿಡ್ ಪಾಸಿಟಿವ್ ಕೇಸ್ ಹೆಚ್ಚಳವಾಗಿದೆ. ಮೊದಲು ಯಾವುದೇ ಕೊವಿಡ್ ಪ್ರಕರಣಗಳು ಪತ್ತೆಯಾಗಿರಲಿಲ್ಲ. ನಂತರದ ದಿನಗಳಲ್ಲಿ 1 ರಿಂದ 2 ಕೇಸ್ ಮಾತ್ರ ಪತ್ತೆಯಾಗಿತ್ತು. ಆದರೆ ನಿನ್ನೆ 5 ಜನರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ. ಇನ್ನು ಈಗಾಗಲೇ ಕೊವಿಡ್ ಪರೀಕ್ಷೆ ಮಾಡಿರುವ 169 ವರದಿ ಬರಲು ಬಾಕಿ ಇದೆ. ಸದ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ 27 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

 • 21 Mar 2021 09:48 AM (IST)

  ಬೀದರ್ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಆತಂಕ

  ಜಿಲ್ಲೆಯಲ್ಲಿ 7 ದಿನದಲ್ಲಿ 312 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಇನ್ನು ಭಾಲ್ಕಿ ತಾಲೂಕಿನ ನಿಟ್ಟೂರು ಸರಕಾರಿ ಶಾಲೆಯ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ 2 ಶಾಲೆ, ಬೀದರ್‌ನ ಬಿಸಿಎಂ ಹಾಸ್ಟೆಲ್, ಬೀದರ್ ನಗರಸಭೆ  ಕೋರ್ಟ್ ಸಂಕೀರ್ಣವನ್ನು ಸೀಲ್‌ಡೌನ್ ಮಾಡಲಾಗಿದೆ. ಸದ್ಯ ನಗರದ ಬ್ರಿಮ್ಸ್ ಕೊವಿಡ್ ಆಸ್ಪತ್ರೆಯಲ್ಲಿ 251 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಈಗಾಗಲೇ 7 ಜನರ ಸ್ಥಿತಿ ಗಂಭೀರವಾಗಿದ್ದು, ಐಸಿಯು ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.