ಜಿಮ್ಸ್ ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೊರೊನಾ ಸೋಂಕಿತ ಆತ್ಮಹತ್ಯೆ

  • TV9 Web Team
  • Published On - 10:49 AM, 4 Sep 2020
ಜಿಮ್ಸ್ ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೊರೊನಾ ಸೋಂಕಿತ ಆತ್ಮಹತ್ಯೆ

ಗದಗ: ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ನಗರದ ಹೊರವಲಯದಲ್ಲಿರುವ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ‌ ಗ್ರಾಮದ ಬಸವರಾಜ ಈಳಗೇರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ನಂತರ ಗದಗ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ ಈಳಗೇರ, ಈ ನಡುವೆ ಕೊರೊನಾ ಸೋಂಕಿನ ಭಯದಿಂದ ನರಳತ್ತಿದ್ದ ಎನ್ನಲಾಗಿದೆ.

ಈ ಮೊದಲು ಹಲವು ಸಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಬಸವರಾಜ, ನಿನ್ನೆ ರಾತ್ರಿ ವೇಳೆ ಜಿಲ್ಲಾಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗದಗ ಗ್ರಾಮಾಂತಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.