ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಯಲ್ಲೇ ನರಳುತ್ತಿದ್ದಾನೆ ಸೋಂಕಿತ, ಎಲ್ಲಿ?
ಹಾವೇರಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 50 ವರ್ಷದ ಸೋಂಕಿತನನ್ನ ಇದುವರೆಗೂ ಆಸ್ಪತ್ರೆಗೆ ಶಿಫ್ಟ್ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಸೋಂಕಿತ ಮನೆಯಲ್ಲಿ ನರಳುವ ಪರಿಸ್ಥಿತಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದ ನಿವಾಸಿಯಾದ 55 ವರ್ಷದ ಸೋಂಕಿತ ಜುಲೈ 16ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು. ನಿನ್ನೆ ಮಧ್ಯಾಹ್ನ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ, ಆಸ್ಪತ್ರೆಗೆ ಶಿಫ್ಟ್ ಆಗೋಕೆ ಸೋಂಕಿತ ನಿನ್ನೆಯಿಂದ ಆಂಬುಲೆನ್ಸ್ […]
ಹಾವೇರಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 50 ವರ್ಷದ ಸೋಂಕಿತನನ್ನ ಇದುವರೆಗೂ ಆಸ್ಪತ್ರೆಗೆ ಶಿಫ್ಟ್ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಸೋಂಕಿತ ಮನೆಯಲ್ಲಿ ನರಳುವ ಪರಿಸ್ಥಿತಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದ ನಿವಾಸಿಯಾದ 55 ವರ್ಷದ ಸೋಂಕಿತ ಜುಲೈ 16ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು. ನಿನ್ನೆ ಮಧ್ಯಾಹ್ನ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೀಗಾಗಿ, ಆಸ್ಪತ್ರೆಗೆ ಶಿಫ್ಟ್ ಆಗೋಕೆ ಸೋಂಕಿತ ನಿನ್ನೆಯಿಂದ ಆಂಬುಲೆನ್ಸ್ ಗಾಗಿ ಕಾದು ಕುಳಿತಿದ್ದರು. ಆದರೆ, ಯಾವೊಬ್ಬ ಅಧಿಕಾರಿಯೂ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಸೋಂಕಿತ ಮನೆಯಲ್ಲಿಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆತನ ಸಂಬಂಧಿಕರು ಹಿಡಿಶಾಪ ಹಾಕುತ್ತಿದ್ದಾರೆ.
Published On - 11:20 am, Sun, 26 July 20