
ಕೊಪ್ಪಳ: ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿ ಉಪವಿಭಾಗ ಆಸ್ಪತ್ರೆ ಇಂದ ಬಿದ್ದು 40 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ.
ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆ ಹಿಂದಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲು ಜಾರಿ ಬಿದ್ದಿದ್ದಾನೆ. ಈ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟಿದ್ದಾನೆ. ಈತ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಉಪವಿಭಾಗ ಆಸ್ಪತ್ರೆ ಸಿಬ್ಬಂದಿ ಶವ ತಗೆದುಕೊಂಡು ಹೋಗಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಶವ ಬಿದ್ದ ಸ್ಥಳದಲ್ಲಿ ಸ್ಯಾನಿಟೈಸ್ ಮಾಡಿದ್ದಾರೆ.