ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್

|

Updated on: Oct 07, 2020 | 7:37 AM

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ […]

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್
Follow us on

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ.

ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ ಸಿ ಬ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಭಾನುವಾರ ಸಂಜೆ 6ಗಂಟೆಗೆ ಆ್ಯಂಬುಲೆನ್ಸ್ ಮೂಲಕ ಎಂಪಿಬಿಯ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಇದೇ ವೇಳೆ ಸಿಬ್ಬಂದಿಗೆ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಆರೋಪಿ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.